ADVERTISEMENT

ಬಕ್ರೀದ್: ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 14:13 IST
Last Updated 17 ಜೂನ್ 2024, 14:13 IST
ಮಧುಗಿರಿ ಪಟ್ಟಣದ ಈದ್ಗಾ ಮೈದಾನದಲ್ಲಿ ಬಕ್ರೀದ್ ಅಂಗವಾಗಿ ಸೋಮವಾರ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು
ಮಧುಗಿರಿ ಪಟ್ಟಣದ ಈದ್ಗಾ ಮೈದಾನದಲ್ಲಿ ಬಕ್ರೀದ್ ಅಂಗವಾಗಿ ಸೋಮವಾರ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು   

ಮಧುಗಿರಿ: ಪಟ್ಟಣದ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಸೋಮವಾರ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ, ದೇಶದ ಅಭಿವೃದ್ಧಿಗೆ ಎಲ್ಲಾ ಧರ್ಮದವರು ಕೈ ಜೋಡಿಸಬೇಕು. ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಮೂಲಕ ದೇಶದ ಪ್ರಗತಿಗೆ ಕೈ ಜೋಡಿಸಬೇಕು. ಸರ್ಕಾರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಲವಾರು ಯೋಜನೆ ರೂಪಿಸಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಎಲ್ಲ ಧರ್ಮೀಯರು ಶಾಂತಿ ಮತ್ತು ಸಹನೆಯಿಂದ ಜೀವನ ನಡೆಸಬೇಕೆಂದು ತಿಳಿಸಿದರು.

ಉಪವಿಭಾಗಾಧಿಕಾರಿ ಗೋಟೋರು ಶಿವಪ್ಪ, ಧರ್ಮ ಗುರು ಮೌಲನ, ಪುರಸಭೆ ಮಾಜಿ ಅಧ್ಯಕ್ಷ ಮೊಹಮ್ಮದ್ ಅಯೂಭ್, ಪುರಸಭೆ ಸದಸ್ಯ ಅಲೀಮ್, ಮಾಜಿ ಸದಸ್ಯ ಸಾಧಿಕ್, ಮುಖಂಡ ಸಯ್ಯದ್, ಬಾಬಾ ಫಕೃದ್ದೀನ್, ಶಫಿ, ಅಲೀಮ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.