ಕುಣಿಗಲ್: ತಾಲ್ಲೂಕಿನ ಕಾಡರಾಮನಹಳ್ಳಿಯಲ್ಲಿ ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದ ನಾಲ್ವರನ್ನು ವಲಯ ಅರಣ್ಯಾಧಿಕಾರಿ ಭಾನುವಾರ ಬಂಧಿಸಿದ್ದಾರೆ.
ಮಾಗಡಿ ತಾಲ್ಲೂಕಿನ ಹೊಂಬಾಳಮ್ಮ ಪೇಟೆಯ ರಂಗನಾಥ, ರಾಮಕೃಷ್ಣ, ಶಿವಶಂಕರ ಹಾಗೂ ರಂಗನಾಥ ಬಂಧಿತರು.
ಕಾಡರಾಮನಹಳ್ಳಿ ಜಮೀನೊಂದರ ಮರದಲ್ಲಿದ್ದ ಎಂಟು ಬಾವಲಿಗಳನ್ನು ಆರೋಪಿಗಳು ಹೊಡೆದು ಹಾಕಿದ್ದರು.
ಖಚಿತ ಮಾಹಿತಿ ಮೇರೆಗೆ ಹುಲಿಯೂರುದುರ್ಗ ವಲಯ ಅರಣ್ಯ ಅಧಿಕಾರಿ ಜಗದೀಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸತ್ತ ಬಾವಲಿಗಳನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.