ADVERTISEMENT

ಮಧುಗಿರಿ | ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 15:32 IST
Last Updated 15 ಸೆಪ್ಟೆಂಬರ್ 2024, 15:32 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಮಧುಗಿರಿ: ತಾಲ್ಲೂಕಿನ ಜಡೆಗೊಂಡನಹಳ್ಳಿ ಸಮೀಪ ಭಾನುವಾರ ರಾತ್ರಿ ಎರಡು‌ ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ತಾಲ್ಲೂಕಿನ ಬಂದ್ರೇನಹಳ್ಳಿ ನಿವಾಸಿ ಅನಿಲ್ ಕುಮಾರ್(35), ಕೊಡಿಗೇನಹಳ್ಳಿ ಹೋಬಳಿ ತೆರೆಯೂರು ಗ್ರಾಮದ ಗೌತಮ್ (35) ಮೃತರು.

ಪಾವಗಡದಿಂದ ಮಧುಗಿರಿಗೆ ತೆರಳುತ್ತಿದ್ದ ಬೈಕ್ ಮತ್ತು‌ ಮಧುಗಿರಿಯಿಂದ ಪಾವಗಡದತ್ತ ಹೊರಟಿದ್ದ ಮತ್ತೊಂದು ಬೈಕ್ ಮುಖಾಮುಖಿಯಾಗಿ ಅಪಘಾತ ಅಪಘಾತ ಸಂಭವಿಸಿದೆ.‌

ಮಧುಗಿರಿ ಸಿಪಿಐ ಹನುಮಂತರಾಯಪ್ಪ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಯಿತು. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.