ತುಮಕೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜೀವನ ಚರಿತ್ರೆಯನ್ನು ಪಠ್ಯದಲ್ಲಿ ಅಳವಡಿಸುವಂತೆ ಶಾಸಕ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.
ಶಿವಕುಮಾರ ಸ್ವಾಮೀಜಿ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು,ಸ್ವಾಮೀಜಿ ಜೀವನ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡಲು ಪಠ್ಯದಲ್ಲಿ ಅಳವಡಿಸಬೇಕು ಎಂದು ಕೇಳಿಕೊಂಡರು.
ಇದಕ್ಕೂ ಮೊದಲು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಶಾಲೆಗಳಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಬಿಸಿ ಊಟಕಾರ್ಯಕ್ರಮಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲಾಗುವುದು ಎಂದುಪ್ರಕಟಿಸಿದರು.
ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ.
ಮಠದಲ್ಲಿ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ.ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆಗಳಿಂದ ಭಕ್ತರು ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲು ಮಠಕ್ಕೆ ಆಗಮಿಸಿದ್ದಾರೆ.
ಇವನ್ನೂ ಓದಿ
*ಸಿದ್ಧಗಂಗಾ ಮಠ: 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ
*ಶಿವಕುಮಾರ ಸ್ವಾಮೀಜಿ ಜಯಂತಿ: ಹೆಣ್ಣುಮಗುವಿಗೆ'ಶಿವಮಣಿ' ಎಂದು ನಾಮಕರಣ ಮಾಡಿದಮುಸ್ಲಿಂ ದಂಪತಿ
*ಬಿಸಿಯೂಟ ಕಾರ್ಯಕ್ರಮಕ್ಕೆಶಿವಕುಮಾರ ಸ್ವಾಮೀಜಿ ಹೆಸರು: ಮುಖ್ಯಮಂತ್ರಿ ಬೊಮ್ಮಾಯಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.