ಶಿರಾ: ರಾಷ್ಟ್ರೀಯ ಹೆದ್ದಾರಿ–48ರ ಹೆಗ್ಗನಹಳ್ಳಿ ಗ್ರಾಮದ ಸಮೀಪ ಸೋಮವಾರ ಮುಂಜಾನೆ ಬಸ್ವೊಂದು ಪಲ್ಟಿಯಾಗಿ 30 ಮಂದಿ ಗಾಯಗೊಂಡಿದ್ದಾರೆ.
ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಅಪಘಡ ಸಂಭಿಸಿದೆ. ಬಸ್ನಲ್ಲಿದ್ದ 30 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಗೊಂಡ ಪ್ರಯಾಣಿಕರಿಗೆ ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.
ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ದಟ್ಟನೆ ಉಂಟಾಗಿ, ವಾಹನಗಳು ಹೆಚ್ಚಾಗಿ ಸಾಲು ಗಟ್ಟಿ ನಿಂತಿದ್ದವು.
ಕಳ್ಳಂಬೆಳ್ಳ ರಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ದಟ್ಟಣೆ ನಿಯಂತ್ರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.