ADVERTISEMENT

ಸಿರಿಧಾನ್ಯ ಪ್ರಾತ್ಯಕ್ಷಿಕೆ, ಮಾಹಿತಿ

​ಪ್ರಜಾವಾಣಿ ವಾರ್ತೆ
Published 9 ಜೂನ್ 2024, 6:18 IST
Last Updated 9 ಜೂನ್ 2024, 6:18 IST
ಗುಬ್ಬಿ ತಾಲ್ಲೂಕಿನ ನಿಟ್ಟೂರಿನಲ್ಲಿ ಸಿರಿಧಾನ್ಯಗಳ ಮಹತ್ವ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು
ಗುಬ್ಬಿ ತಾಲ್ಲೂಕಿನ ನಿಟ್ಟೂರಿನಲ್ಲಿ ಸಿರಿಧಾನ್ಯಗಳ ಮಹತ್ವ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು   

ಗುಬ್ಬಿ: ದ್ವಿದಳ ಧಾನ್ಯ ಹಾಗೂ ಸಿರಿ ಧಾನ್ಯಗಳನ್ನು ಹೆಚ್ಚಾಗಿ ಬಳಸುವುದರಿಂದ ಆರೋಗ್ಯದಲ್ಲಿ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಒಕ್ಕೂಟದ ಅಧ್ಯಕ್ಷೆ ಮಂಗಳ ಗೌರಮ್ಮ ತಿಳಿಸಿದರು.

ತಾಲ್ಲೂಕಿನ ನಿಟ್ಟೂರಿನಲ್ಲಿ ಶನಿವಾರ ನಡೆದ ಸಿರಿಧಾನ್ಯ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಿರಿಧಾನ್ಯಗಳಲ್ಲಿ ಹೆಚ್ಚಿನ ಪೋಷಕಾಂಶಗಳು ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಆಧುನಿಕ ಆಹಾರ ಪದ್ಧತಿಯಿಂದಾಗಿ ಚಿಕ್ಕ ವಯಸ್ಸಿನಲ್ಲಿಯೇ ಅನೇಕ ಕಾಯಿಲೆಗಳಿಗೆ ಬಲಿಯಾಗುತ್ತಿರುವುದು ದುರಾದೃಷ್ಟಕರ ಎಂದರು.

ADVERTISEMENT

ತ್ರಿವೇಣಿ ಉಪನ್ಯಾಸ ನೀಡಿ, ರೈತರು ಸಿರಿಧಾನ್ಯ ಬೆಳೆಯಲು ಹೆಚ್ಚಿನ ಆಸಕ್ತಿ ವಹಿಸುತಿಲ್ಲ. ವಾಣಿಜ್ಯ ಬೆಳೆಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಬಾರಿ ಬೆಲೆ ತೆರಬೇಕಾಗುತ್ತದೆ ಎಂದರು.

ಮೇಲ್ವಿಚಾರಕ ರಾಜೇಶ್ ಮಾತನಾಡಿ, ಸಿರಿಧಾನ್ಯ ಬಳಕೆಯಿಂದ ಮಧುಮೇಹ ಹಾಗೂ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ಸಾಧ್ಯ. ಸಿರಿಧಾನ್ಯಗಳನ್ನು ನೇರವಾಗಿ ಬಳಸುವ ಜೊತೆಗೆ ಮಾಲ್ಟ್ ಪೌಡರ್ ಹಾಗೂ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ತಯಾರಿಸುವ ಮೂಲಕ ಬಳಸಿಕೊಳ್ಳಬಹುದು ಎಂದು ಹೇಳಿದರು.

ನವಣೆ ಹಾಗೂ ಬರಗುಗಳ ಅನ್ನ ಹಾಗೂ ರಾಗಿ ಮಾಲ್ಟ್ ಸ್ಥಳದಲ್ಲಿಯೇ ತಯಾರಿಸಿ ಎಲ್ಲರಿಗೂ
ನೀಡಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯೆ ಹಸೀನಾ ತಾಜ್, ಒಕ್ಕೂಟದ ಪದಾಧಿಕಾರಿಗಳಾದ ಕನಕಲಕ್ಷ್ಮಿ, ಬೋರೇಗೌಡ, ನಟರಾಜ್, ವಲಯ ಮೇಲ್ವಿಚಾರಕಿ ಇಂದ್ರಮ್ಮ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜಯಲಕ್ಷ್ಮೀ, ಸೇವಾಪ್ರತಿನಿಧಿ ಲತಾಮಣಿ, ಹೇಮ, ಲಕ್ಷ್ಮಮ್ಮ, ಸಿಎಸ್‌ಸಿ ಕಾರ್ಯಕರ್ತರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.