ತುಮಕೂರು: ನಗರದ ಸಿದ್ಧಗಂಗಾ ಮಠದಲ್ಲಿ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 112ನೇ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಮಠದ ಸಾವಿರಾರು ವಿದ್ಯಾರ್ಥಿಗಳು ಆಲಿಸಿದರು.
ಮಠದ ಆವರಣದಲ್ಲಿ ಬೃಹತ್ ಎಲ್‌ಇಡಿ ಪರದೆ ಅಳವಡಿಸಿ ‘ಮನ್ ಕಿ ಬಾತ್’ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ವಿದ್ಯಾರ್ಥಿಗಳು ಶಿಸ್ತಿನಿಂದ ಕುಳಿತಿದ್ದರು.
ಸಿದ್ಧಗಂಗಾ ಮಠದ ಕಿರಿಯ ಸ್ವಾಮೀಜಿ ಶಿವಸಿದ್ಧೇಶ್ವರ ಸ್ವಾಮೀಜಿ ಕಾರ್ಯಕ್ರಮದ ನಂತರ ಮಾತನಾಡಿ, ನಮ್ಮ ದೇಶದ ಸಾವಿರಾರು ವರ್ಷಗಳ ಸಾಂಸ್ಕೃತಿಕ ಪರಂಪರೆ ಉಳಿಸುವ ಕುರಿತು ಮೋದಿಯವರು ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದರು. ಮಾನವ ಸಂಪನ್ಮೂಲದಿಂದ ದೇಶದ ಅಭಿವೃದ್ಧಿ ಸಾಧ್ಯ. ಈ ಕಾರಣಕ್ಕೆ ಮಕ್ಕಳು ಶೈಕ್ಷಣಿಕವಾಗಿ ಮುಂದೆ ಬರಬೇಕು, ದೇಶಪ್ರೇಮ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು ಎಂದು ತಿಳಿಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.