ತುಮಕೂರು: ಭಾರತೀಯ ಸ್ಟೇಟ್ ಬ್ಯಾಂಕ್‌ನ ಪೂರ್ವ ಮತ್ತು ಪಶ್ಚಿಮ ವಲಯ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವತಿಯಿಂದ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯ ನಡೆಯಿತು.
ಭಾರತೀಯ ಸ್ಟೇಟ್ ಬ್ಯಾಂಕ್‌ನ ಬೆಂಗಳೂರು ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕ ಕ್ರಿಶನ್ ಶರ್ಮಾ ‘ಸ್ವಚ್ಛತೆಯೇ ಸೇವೆ’ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಚ್ಛತೆ ಎಂಬುವುದು ಕೇವಲ ಒಂದು ದಿನ ಕೆಲಸವಲ್ಲ. ಇದೊಂದು ನಿರಂತರ ಪ್ರಕ್ರಿಯೆ ಎಂದರು.
ಕಸ ಮುಕ್ತ ಭಾರತಕ್ಕಾಗಿ ಸ್ವಚ್ಛ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ವಚ್ಛತೆಗಾಗಿ ಮುಂದಾಳತ್ವ ವಹಿಸಿಕೊಂಡಿದೆ. ನಮ್ಮ ಮನೆ ಹಾಗೂ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟು ಕೊಳ್ಳಬೇಕು ಎಂದು ಹೇಳಿದರು.
ಭಾರತೀಯ ಸ್ಟೇಟ್ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕರಾದ ಅನುರಾಗ್ ಜೋಷಿ, ವಿ.ಎನ್.ಶರ್ಮಾ, ಉಪ ಪ್ರಧಾನ ವ್ಯವಸ್ಥಾಪಕ ಪಂಕಜ್ ಕುಮಾರ್, ಪ್ರಾದೇಶಿಕ ವ್ಯವಸ್ಥಾಪಕರಾದ ರಾಮಪ್ರಸಾದ್, ಶಂಕರ್ ಮಿಶ್ರ, ಉಪ ವ್ಯವಸ್ಥಾಪಕ ವಾದಿರಾಜ್, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಪ್ರಕಾಶ್ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.