ADVERTISEMENT

ತುಮಕೂರಿಗೆ ಇಂದು ಸಿದ್ದರಾಮಯ್ಯ: ₹657 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

1 ಲಕ್ಷ ಜನ ಭಾಗವಹಿಸುವ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2024, 0:30 IST
Last Updated 29 ಜನವರಿ 2024, 0:30 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ತುಮಕೂರು: ಸ್ಮಾರ್ಟ್‌ ಸಿಟಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮೊದಲ ಹಂತದ ಕಾಮಗಾರಿ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ (ಜ.29) ಚಾಲನೆ ನೀಡಲಿದ್ದಾರೆ.

ನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಒಟ್ಟು ₹657 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಸುಮಾರು 1 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. 

ADVERTISEMENT

ಜಿಲ್ಲೆಯ ವಿವಿಧ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಜಲ ಜೀವನ್‌ ಮಿಷನ್‌ ಯೋಜನೆಯಡಿ ಒಟ್ಟು 658 ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ನಿರ್ಮಿಸಿರುವ ‘ವಿವೇಕ ಕೊಠಡಿ’ಗಳನ್ನು ಉದ್ಘಾಟಿಸಲಿದ್ದಾರೆ.

ತುಮಕೂರು ಗ್ರಾಮಾಂತರ, ತುರುವೇಕೆರೆ ಮತ್ತು ತಿಪಟೂರು ವ್ಯಾಪ್ತಿಯ ಕರ್ನಾಟಕ ಪಬ್ಲಿಕ್‌ ಶಾಲೆ, ವಿವೇಕ ಶಾಲಾ ಕೊಠಡಿ ಹಾಗೂ ಪದವಿ ಪೂರ್ವ ಕಾಲೇಜು ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

ಇದೇ ವೇಳೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ 30 ಸಾವಿರ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಿದ್ದಾರೆ. 

ತುಮಕೂರಿನ ಜೂನಿಯರ್‌ ಕಾಲೇಜು ಮೈದಾನದಲ್ಲಿ ಸೋಮವಾರ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಜಿ.ಪರಮೇಶ್ವರ, ಕೆ.ಎನ್‌.ರಾಜಣ್ಣ, ರಾಮಲಿಂಗಾರೆಡ್ಡಿ, ಎಚ್‌.ಸಿ.ಮಹದೇವಪ್ಪ, ಕೃಷ್ಣ ಬೈರೇಗೌಡ, ಎನ್‌.ಚಲುವರಾಯಸ್ವಾಮಿ, ಎಚ್‌.ಕೆ.ಪಾಟೀಲ, ಕೆ.ಜೆ.ಜಾರ್ಜ್‌ ಇತರರು ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.