ADVERTISEMENT

ವೀರಶೈವ– ಲಿಂಗಾಯತ ಇಬ್ಬಾಗಕ್ಕೆ ಯತ್ನಿಸಿದ್ದೆ ಕಾಂಗ್ರೆಸ್ ಹಿನ್ನಡೆಗೆ ಕಾರಣ

ಸಿದ್ಧರಬೆಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಳೆಹೊನ್ನೂರು ರಂಭಾಪುರಿಮಠದ ಡಾ.ವೀರಸೋಮೇಶ್ವರ ಶಿವಾಚಾರ್ಯರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2019, 10:00 IST
Last Updated 7 ಜೂನ್ 2019, 10:00 IST
ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ
ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ   

ತೋವಿನಕೆರೆ (ತುಮಕೂರು ಜಿಲ್ಲೆ): ‘ವೀರಶೈವ ಮತ್ತು ಲಿಂಗಾಯತರನ್ನು ಬೇರೆ ಬೇರೆ ಮಾಡಲು ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಪ್ರಯತ್ನಿಸಿದರು. ಅದರ ಪರಿಣಾಮ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹಿನ್ನೆಡೆಯಾಯಿತು’ ಎಂದು ಬಾಳೆಹೊನ್ನೂರು ರಂಭಾಪುರಿಮಠದ ಪೀಠಾಧ್ಯಕ್ಷ ಪ್ರಸನ್ನ ರೇಣುಕ ಡಾ.ವೀರ ಸೋಮೇಶ್ವರ ಶಿವಾಚಾರ್ಯರು ಅಭಿಪ್ರಾಯಪಟ್ಟರು.

ಗುರುವಾರ ಕೊರಟಗೆರೆ ತಾಲ್ಲೂಕು ಸಿದ್ಧರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾಮಠದ 13ನೇ ವಾರ್ಷಿಕೋತ್ಸವ, ಉಚಿತ ಸಾಮೂಹಿಕ ವಿವಾಹ ಹಾಗೂ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಮಾತನಾಡಿದರು.

‘ವೀರಶೈವ– ಲಿಂಗಾಯತರನ್ನು ಒಡೆಯಲು ಹೋಗಿದ್ದೇ ಕಾಂಗ್ರೆಸ್‌ಗೆ ಅಪಜಯವಾಗಲು ಕಾರಣ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರಿಗೇ ಹೇಳಿದ್ದೇವೆ. ಯಾವುದೇ ರಾಜಕಾರಣಿಗಳಾಗಲಿ, ಯಾವ ಧರ್ಮದಲ್ಲೂ ಹಸ್ತಕ್ಷೇಪ ಮಾಡಬಾರದು. ಧರ್ಮದ ಭಾವನೆಗೆ ಧಕ್ಕೆ ತರಲು ಹೋಗಬಾರದು. ಎಲ್ಲ ಧರ್ಮ, ಜನಾಂಗಗಳ ಆದರ್ಶ ಉಳಿಸಿಕೊಂಡು ಹೋಗಬೇಕು’ ಎಂದರು.

ADVERTISEMENT

‘ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಜಿ.ಎಸ್.ಬಸವರಾಜ್ ಸೋಲಿಸಿದ್ದಾರೆ. ಕೇಂದ್ರ ಮುಂದಿನ ಸಂಪುಟ ವಿಸ್ತರಣೆ ಮಾಡುವಾಗ ಬಸವರಾಜ್ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಕೊಡಬೇಕು. ಈ ದಿಸೆಯಲ್ಲಿ ಬಿಜೆ‍ಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೂ ಪ್ರಯತ್ನಿಬೇಕು' ಎಂದು ನುಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.