ADVERTISEMENT

ತುಮಕೂರಿನಲ್ಲೇ ವಿಮಾನ ನಿಲ್ದಾಣ: ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 6 ಜುಲೈ 2024, 21:28 IST
Last Updated 6 ಜುಲೈ 2024, 21:28 IST

ತುಮಕೂರು: ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಆದರೆ, ಇಂತಹ ಸಮಯದಲ್ಲೇ ತಮಿಳುನಾಡು ಸರ್ಕಾರ ಹೊಸೂರು ಬಳಿ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಹೇಳುತ್ತಿದೆ ಎಂದು ಸೋಮಣ್ಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ, ದಾಬಸ್‌ಪೇಟೆ ಬಳಿ ಬೃಹತ್ ಮಟ್ಟದಲ್ಲಿ ಕೈಗಾರಿಕಾ ಕೇಂದ್ರ ನಿರ್ಮಾಣ
ವಾಗುತ್ತಿದೆ. ಇದು ದೇಶದಲ್ಲೇ ದೊಡ್ಡ ಕೈಗಾರಿಕಾ ಪ್ರದೇಶವಾಗಿ ರೂಪುಗೊಳ್ಳಲಿದೆ. ಇದಕ್ಕೆ ಪರ್ಯಾಯವಾಗಿ ಜಿಲ್ಲೆಯಲ್ಲಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿದರೆ ಸಹಕಾರಿಯಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT