ಗುಬ್ಬಿ: ತಾಲ್ಲೂಕಿನ ನಿಟ್ಟೂರು ಸಮೀಪದ ತ್ಯಾಗಟೂರು ಗೇಟ್‌ನಲ್ಲಿ ಸೋಮವಾರ ತಾಯಿಯೇ ಮಗುವಿಗೆ ವಿಷಹಾಕಿ ಹತ್ಯೆ ಮಾಡಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಮಗು ಮೃತಪಟ್ಟಿದ್ದು, ಮಗುವಿನ ತಾಯಿ ಇಂದಿರಮ್ಮ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದಿರಮ್ಮ ನೀಡಿದ ಹೇಳಿಕೆ ಆಧರಿಸಿ ಪೊಲೀಸರು ಆಕೆಯ ಪ್ರಿಯಕರ ಯತೀಶ್ ಹಾಗೂ ಆತನ ಪತ್ನಿ ವಿಜಯ ಅವರನ್ನು ವಶಕ್ಕೆ ಪಡೆದಿದ್ದಾರೆ.
ವಿಜಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಯತೀಶ್ ಅವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪತ್ನಿ ವಿಜಯ ಅವರ ಕುಮ್ಮಕ್ಕಿನಿಂದಲೇ ಪ್ರಿಯಕರ ಯತೀಶ್ ವಿಷ ಪ್ರಾಶನ ಮಾಡಿದ್ದರು ಎಂದು ಇಂದಿರಮ್ಮ ಪೊಲೀಸರಿಗೆ ತಿಳಿಸಿದ್ದಾರೆ.
ಕೊಲೆ ಹಾಗೂ ಕೊಲೆಗೆ ಸಂಚು ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಿಶೇಷ ತಂಡ ರಚಿಸಿ ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.