ತುಮಕೂರು: ಜಿಲ್ಲೆಯ ದತ್ತಮಾಲಾಧಾರಿಗಳು ಮಂಗಳವಾರ ಚಿಕ್ಕಮಗಳೂರಿನ ದತ್ತ ಪೀಠಕ್ಕೆ ತೆರಳಿದರು. 10 ಬಸ್‌ಗಳಲ್ಲಿ ನಗರದಿಂದ ಪ್ರಯಾಣ ಬೆಳೆಸಿದರು.
ದತ್ತ ಪೀಠಕ್ಕೆ ತೆರಳುವ ಮುನ್ನ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಕುಂಟಮ್ಮನ ತೋಟದಲ್ಲಿರುವ ಆಂಜನೇಯಸ್ವಾಮಿ ದೇವಾಲಯದವರೆಗೆ ಪಾದಯಾತ್ರೆ ನಡೆಸಿದರು. ಅಲ್ಲಿ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದು, ಅಲ್ಲಿಂದ ಬಸ್‌ನಲ್ಲಿ ತೆರಳಿದರು.
ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಂಗನಹಳ್ಳಿ ಮಠದ ಬಸವಾನಂದ ಸ್ವಾಮೀಜಿ, ಬೆಳ್ಳಾವಿ ಕಾರದ ಮಠದ ಕಾರದ ವೀರಬಸವ ಸ್ವಾಮೀಜಿ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮುಖಂಡರಾದ ಎಸ್.ಪಿ.ಚಿದಾನಂದ್, ಡಾ.ಎಸ್.ಪರಮೇಶ್ ಮೊದಲಾದವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.