ತುಮಕೂರು: ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯರಾಮಪ್ಪ (67) ಎಂಬುವರು ಗುರುವಾರ ಮೃತಪಟ್ಟಿದ್ದು ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಕಲುಷಿತ ನೀರು ಕುಡಿದು ವಾಂತಿ, ಭೇದಿಯಿಂದ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಯರಾಮಪ್ಪ ಮೊದಲಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಗಂಭೀರ ಸಮಸ್ಯೆ ಕಾಣಿಸಿಕೊಂಡ ನಂತರ ಜೂನ್ 13ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಇನ್ನೂ ಏಳು ಮಂದಿ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯು ತ್ತಿದ್ದಾರೆ’ ಎಂದು ಡಿಎಚ್‌ಒ ಡಾ.ಡಿ.ಎನ್.ಮಂಜುನಾಥ್ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.