ADVERTISEMENT

ಕಾರ್ಯಕರ್ತೆ, ಸಹಾಯಕಿಯರ ಕಾಯಂಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2024, 5:45 IST
Last Updated 16 ನವೆಂಬರ್ 2024, 5:45 IST
ತುಮಕೂರಿನಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಕಾಯಮಾತಿಗೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘ (ಸಿಐಟಿಯು) ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಪದಾಧಿಕಾರಿಗಳಾದ ಗೌರಮ್ಮ, ಜಬೀನಾ ಖಾತೂನ್‌, ವಿನೋದ ಇತರರು ಹಾಜರಿದ್ದರು
ತುಮಕೂರಿನಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಕಾಯಮಾತಿಗೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘ (ಸಿಐಟಿಯು) ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಪದಾಧಿಕಾರಿಗಳಾದ ಗೌರಮ್ಮ, ಜಬೀನಾ ಖಾತೂನ್‌, ವಿನೋದ ಇತರರು ಹಾಜರಿದ್ದರು   

ತುಮಕೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

‘ಕಾರ್ಯಕರ್ತೆಯರು ಗುರುವಾರ, ಶುಕ್ರವಾರ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅಧಿಕಾರಿ ಮೂಲಕ ಪ್ರಧಾನಿ, ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಜಿ.ಕಮಲಾ, ಪ್ರಧಾನ ಕಾರ್ಯದರ್ಶಿ ಗುಲ್ಜಾರ್‌ ಬಾನು, ಖಜಾಂಚಿ ಅನುಸೂಯ ತಿಳಿಸಿದ್ದಾರೆ.

ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ಜಾರಿಯಾಗಿ 2025ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಸುಮಾರು 14 ಲಕ್ಷ ಅಂಗನವಾಡಿ ಕೇಂದ್ರಗಳಲ್ಲಿ 28 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಕೆಲಸ ಮಾಡುತ್ತಿದ್ದಾರೆ. ನಿಸ್ವಾರ್ಥ ಸೇವೆಯ ಮುಖಾಂತರ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂಬುದನ್ನು ಸರ್ಕಾರ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಈವರೆಗೆ ನಮ್ಮನ್ನು ಕಾರ್ಮಿಕರು ಎಂದು ಗುರುತಿಸಿಲ್ಲ. ಕನಿಷ್ಠ ವೇತನ ನೀಡುತ್ತಿಲ್ಲ. ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳಿಲ್ಲ. ಗುಣಮಟ್ಟದ ಪೌಷ್ಟಿಕಾಂಶ ಆಹಾರದ ಕೊರತೆ ಎದುರಾಗಿದೆ. ಅವರಿಂದ ಹೆಚ್ಚುವರಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ಒದಗಿಸಿ, ಯೋಜನೆ ಬಲಪಡಿಸಬೇಕು. ಸರ್ಕಾರಿ ನೌಕರರಾಗಿ ಕಾಯಂಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.