ADVERTISEMENT

ತುಮಕೂರು: ಎಕ್ಸ್‌ಪ್ರೆಸ್ ಕಾಲುವೆ ಕಾಮಗಾರಿ ಸ್ಥಗಿತಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಮೇ 2024, 6:07 IST
Last Updated 16 ಮೇ 2024, 6:07 IST
ತುಮಕೂರು ಜಿಲ್ಲಾಧಿಕಾರಿ ಕಚೇರಿ ಸಹಾಯಕ ಮೋಹನ್‍ ಕುಮಾರ್ ಅವರಿಗೆ ಸಂಯುಕ್ತ ಹೋರಾಟ– ಕರ್ನಾಟಕ ಸಂಘಟನೆ ಪ್ರಮುಖರು ಬುಧವಾರ ಮನವಿ ಸಲ್ಲಿಸಿದರು. ಸಂಘಟನೆ ಮುಖಂಡರಾದ ಸಿ.ಯತಿರಾಜು, ಜಿ.ಸಿ.ಶಂಕರಪ್ಪ, ಸಿ.ಅಜ್ಜಪ್ಪ, ಕಂಬೇಗೌಡ, ಬಿ.ಉಮೇಶ್, ಪಂಡಿತ್ ಜವಾಹರ್ ಇತರರು ಭಾಗವಹಿಸಿದ್ದರು
ತುಮಕೂರು ಜಿಲ್ಲಾಧಿಕಾರಿ ಕಚೇರಿ ಸಹಾಯಕ ಮೋಹನ್‍ ಕುಮಾರ್ ಅವರಿಗೆ ಸಂಯುಕ್ತ ಹೋರಾಟ– ಕರ್ನಾಟಕ ಸಂಘಟನೆ ಪ್ರಮುಖರು ಬುಧವಾರ ಮನವಿ ಸಲ್ಲಿಸಿದರು. ಸಂಘಟನೆ ಮುಖಂಡರಾದ ಸಿ.ಯತಿರಾಜು, ಜಿ.ಸಿ.ಶಂಕರಪ್ಪ, ಸಿ.ಅಜ್ಜಪ್ಪ, ಕಂಬೇಗೌಡ, ಬಿ.ಉಮೇಶ್, ಪಂಡಿತ್ ಜವಾಹರ್ ಇತರರು ಭಾಗವಹಿಸಿದ್ದರು   

ತುಮಕೂರು: ಎಕ್ಸ್‌ಪ್ರೆಸ್ ಕಾಲುವೆ ಮೂಲಕ ಮಾಗಡಿ ತಾಲ್ಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಕಾಮಗಾರಿಯನ್ನು ತಕ್ಷಣ ನಿಲ್ಲಿಸುವಂತೆ ಸಂಯುಕ್ತ ಹೋರಾಟ– ಕರ್ನಾಟಕ ಸಂಘಟನೆ ಒತ್ತಾಯಿಸಿದೆ.

ಈಗಾಗಲೇ ಜಿಲ್ಲೆಗೆ ಬರುವ ಹೇಮಾವತಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಕುಡಿಯಲು, ಕೃಷಿಗೆ ಹೇಮಾವತಿ ನೀರನ್ನೇ ಜನರು ಆಶ್ರಯಿಸಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ಎಕ್ಸ್‌ಪ್ರೆಸ್ ಕಾಲುವೆ ನಿರ್ಮಿಸಿ ನೀರು ತೆಗೆದುಕೊಂಡು ಹೋದರೆ ಜಿಲ್ಲೆಯ ಜನರು ಪರಿತಪಿಸಬೇಕಾಗುತ್ತದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕೈಗೊಂಡ ನಿರ್ಣಯ ಕೇವಲ ಪುಸ್ತಕಕ್ಕೆ ಸೀಮಿತವಾಗಬಾರದು. ಜಿಲ್ಲಾ ಆಡಳಿತ, ರಾಜ್ಯ ಸರ್ಕಾರ ಮೌನಕ್ಕೆ ಶರಣಾಗದೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ADVERTISEMENT

ಮನವಿ ಸಲ್ಲಿಸಿದ ನಂತರ ಸಂಘಟನೆ ಸಂಚಾಲಕ ಸಿ.ಯತಿರಾಜು, ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ, ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಸಿ.ಅಜ್ಜಪ್ಪ ಮಾತನಾಡಿದರು. ಮುಂದಿನ ದಿನಗಳಲ್ಲಿ ದುಂಡುಮೇಜಿನ ಸಭೆ ನಡೆಸಿ ಜಿಲ್ಲೆಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದರು.

ಎಐಕೆಎಸ್ ಸಂಚಾಲಕ ಕಂಬೇಗೌಡ, ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಬಿ.ಉಮೇಶ್, ಮುಖಂಡರಾದ ವೆಂಕಟೇಗೌಡ, ಶಬ್ಬೀರ್, ರಂಗಹನುಮಯ್ಯ, ಜನಾಂದೋಲನ ಸಂಘಟನೆಯ ಪಂಡಿತ್ ಜವಾಹರ್, ಎಐಕೆಎಸ್‍ನ ಕಾಂತರಾಜು, ಕೊಳೆಗೇರಿ ಹಿತರಕ್ಷಣಾ ಸಮಿತಿಯ ಅರುಣ್ ಮುಂತಾದವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.