ADVERTISEMENT

ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಬರಲು ಅರಸು ಕಾರಣ: ಟಿ.ಬಿ.ಜಯಚಂದ್ರ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2023, 12:57 IST
Last Updated 20 ಆಗಸ್ಟ್ 2023, 12:57 IST
ಶಿರಾದ ದೇವರಾಜ ಅರಸು ಭವನದಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮದಿನ ಆಚರಿಸಲಾಯಿತು
ಶಿರಾದ ದೇವರಾಜ ಅರಸು ಭವನದಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮದಿನ ಆಚರಿಸಲಾಯಿತು   

ಶಿರಾ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಾರಿಗೊಳಿಸಿದ ಜನಪರ ಕಾರ್ಯಕ್ರಮಗಳಿಂದಾಗಿ ಇಂದು ಬಡಜನತೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.

ನಗರದ ದೇವರಾಜ ಅರಸು ಭವನದಲ್ಲಿ ಭಾನುವಾರ ತಾಲ್ಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಜಿಲ್ಲೆಗೆ ಹೇಮಾವತಿ ನೀರು ಬರಲು ಸಹ ಅರಸು ಕಾರಣ. ಇದರಿಂದಾಗಿ ಶಿರಾಗೆ ನೀರು ತರಲು ಸಾಧ್ಯವಾಯಿತು. ಯುವಕರನ್ನು ರಾಜಕೀಯವಾಗಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ನನ್ನ ರಾಜಕೀಯ ಬದುಕಿಗೆ ಸಹ ಅರಸು ಕಾರಣ. ಅವರಿಂದಾಗಿ ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದ್ದು, ಗುರುಗಳಾಗಿದ್ದ ಅರಸು ಅವರನ್ನು ಎಂದೂ ಮರೆಯಲು ಸಾಧ್ಯವಿಲ್ಲ’ ಎಂದರು.

ADVERTISEMENT

ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ ಮಾತನಾಡಿ, ದೇವರಾಜ ಅರಸು ತಮ್ಮ ಜೀವಿತವನ್ನು ಶೋಷಿತರು, ದಲಿತರು, ಹಿಂದುಳಿದ ವರ್ಗದ ಅಭಿವೃದ್ಧಿಗೆ ಮುಡುಪಾಗಿಟ್ಟಿದ್ದರು ಎಂದರು.

ತಹಶೀಲ್ದಾರ್ ಮುರಳೀಧರ್, ತಾ.ಪಂ ಇಒ ಅನಂತರಾಜು, ಬಿಸಿಎಂ ಇಲಾಖೆ ಅಧಿಕಾರಿ ಶಶಿಕಲಾ, ನಗರಸಭೆ ಅಧ್ಯಕ್ಷೆ ಪೂಜಾ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎಲ್.ರಂಗನಾಥ್, ಅರೇಹಳ್ಳಿ ರಮೇಶ್, ನಿವೃತ್ತ ಪ್ರಾಂಶುಪಾಲ ಪಿ.ಎಚ್.ಮಹೇಂದ್ರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.