ಗುಬ್ಬಿ: ಗೋಸಲ ಚನ್ನಬಸವೇಶ್ವರ ಹಾಗೂ ಮಲ್ಲಿಕಾರ್ಜುನ, ಪಾರ್ವತಮ್ಮನವರ ಕಾರ್ತಿಕ ಮಾಸದ ಹೂವಿನ ವಾಹನ ಮಹೋತ್ಸವ ಡಿ. 12ರ ಮಂಗಳವಾರ ರಾತ್ರಿ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಬೆಳಿಗ್ಗೆಯಿಂದ ದೇವಾಲಯದಲ್ಲಿ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನಡೆಯಲಿದೆ. ರಾತ್ರಿ 10.30ಕ್ಕೆ ದೇವರ ಮೂರ್ತಿಗಳನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಮಂಗಳವಾದ್ಯದೊಂದಿಗೆ ವಿಶೇಷವಾಗಿ ಅಲಂಕೃತ ಪುಷ್ಪರಥದಲ್ಲಿ ಪ್ರತಿಷ್ಠಾಪಿಸಿ ರಾಜಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ.
ಡಿ.13 ರಂದು ಬೆಳಿಗ್ಗೆ 8.30ಕ್ಕೆ ಮೆರವಣಿಗೆ ಪ್ರಾರಂಭವಾಗಿ ಭಕ್ತರು ಪೂಜೆ ಸಲ್ಲಿಸಿದ ನಂತರ ಸಂಜೆ ಮುಕ್ತಾಯವಾಗುತ್ತದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.