ADVERTISEMENT

ಕುಣಿಗಲ್‌: ಪ್ರಸಕ್ತ ವರ್ಷ 2,105 ಮಂದಿಗೆ ನಾಯಿ ಕಡಿತ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 14:47 IST
Last Updated 5 ಅಕ್ಟೋಬರ್ 2024, 14:47 IST
ಕುಣಿಗಲ್‌ನ ಪ್ರಮುಖ ಬೀದಿಗಳಲ್ಲಿ ನಾಯಿಗಳ ಹಿಂಡು
ಕುಣಿಗಲ್‌ನ ಪ್ರಮುಖ ಬೀದಿಗಳಲ್ಲಿ ನಾಯಿಗಳ ಹಿಂಡು    

ಕುಣಿಗಲ್: ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿಯಂತ್ರಣಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪಟ್ಟಣದ ಕುವೆಂಪು ನಗರದಲ್ಲಿ ಶುಕ್ರವಾರ ಮಹಿಳೆಯೊಬ್ಬರ ಮೇಲೆ ಹುಚ್ಚುನಾಯಿ ದಾಳಿ ಮಾಡಿ, ತೀವ್ರಗಾಯಗೊಳಿಸಿತ್ತು. ಐದು ಕಡೆಗಳಲ್ಲಿ ಬೀದಿ ನಾಯಿಗಳು ನಾಗರಿಕರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ.

ಪಟ್ಟಣದ ಗಲ್ಲಿಗಳಲ್ಲಿ ನಾಯಿಗಳ ಹಿಂಡು ಹೆಚ್ಚಾಗಿದ್ದು, ಶಾಲೆಗೆ ಹೋಗುವ ಮಕ್ಕಳು, ಮಹಿಳೆಯರು ಎಚ್ಚರಿಕೆಯಿಂದ ಹೋದರೂ ನಾಯಿಗಳ ಕಾಟದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಕುವೆಂಪು ನಗರದ ಶಶಿಕಲಾ ಕೃಷ್ಣಪ್ಪ, ಶ್ರೀಮತಿ, ರಾಧಾ ಪ್ರಕಾಶ್, ಶೋಭಾ ದೂರಿದ್ದಾರೆ.

ADVERTISEMENT

ಆರೋಗ್ಯ ಇಲಾಖೆ ದಾಖಲೆ ಪ್ರಕಾರ ತಾಲ್ಲೂಕಿನಲ್ಲಿ ಕಳೆದ ವರ್ಷ (2023)ರಲ್ಲಿ 3,030 ಮಂದಿ ನಾಯಿ ಕಡಿತಕ್ಕೊಳಗಾಗಿ ಚಿಕಿತ್ಸೆ ಪಡೆದಿದ್ದಾರೆ. 2024ರ ಸೆಪ್ಟೆಂಬರ್‌ ಅಂತ್ಯಕ್ಕೆ 2,105 ಮಂದಿ ಚಿಕಿತ್ಸೆ ಪಡೆದಿದ್ದಾರೆ.

ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿರುವ ಪುರಸಭೆ ಮತ್ತು ಪಶು ಸಂಗೋಪನಾ ಇಲಾಖೆಯವರು ಹೆಚ್ಚು ಗಮನಹರಿಸಿ ನಿಯಂತ್ರಿಸಲು ಕಾಳಿಕಾಂಬ ಸೇವಾ ಸಮಿತಿ ಅಧ್ಯಕ್ಷ ಕೆ.ಬಿ.ಕುಮಾರ್ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.