ತುಮಕೂರು: ನಗರದ ವಿವಿಧ ಚರ್ಚ್‌ಗಳಲ್ಲಿ ಭಾನುವಾರ ಕ್ರೈಸ್ತರು ‘ಈಸ್ಟರ್ ಸಂಡೇ’ ಆಚರಣೆ ಮಾಡಿದರು. ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.
ಈಸ್ಟರ್ ಸಂಡೇ ಕ್ರಿಸ್‌ಮಸ್‌ನಷ್ಟೇ ಪ್ರಾಮುಖ್ಯತೆ ಪಡೆದುಕೊಂಡಿದೆ. ಬೆಳಿಗ್ಗೆ ಪ್ರಾರ್ಥನೆಯಲ್ಲಿ ಭಾಗವಹಿಸಿ, ಮಧ್ಯಾಹ್ನ ಕುಟುಂಬದ ಸದಸ್ಯರೆಲ್ಲ ಒಂದೆಡೆ ಸೇರಿ ಹಬ್ಬದೂಟ ಮಾಡಿದರು. ಕ್ರೈಸ್ತ ಸಮುದಾಯದವರ 40 ದಿನಗಳ ಉಪವಾಸ ಭಾನುವಾರಕ್ಕೆ ಅಂತ್ಯವಾಯಿತು.
ಹೊರಪೇಟೆಯ ಲೂರ್ದು ಮಾತೆ ಚರ್ಚ್, ಸಿಎಸ್‌ಐ ವೆಸ್ಲಿ ಚರ್ಚೆ ಸೇರಿದಂತೆ ಹಲವು ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆಗೆ ಅವಕಾಶ ಕಲ್ಪಿಸಲಾಗಿತ್ತು. ಒಬ್ಬರಿಗೊಬ್ಬರು ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಸಂಜೆ ಚರ್ಚ್‌ಗಳಲ್ಲಿ ಮಕ್ಕಳು, ಮಹಿಳೆಯರು, ಯುವಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಓಟ, ಎತ್ತರ ಜಿಗಿತ ಸೇರಿದಂತೆ ವಿವಿಧ ಆಟಗಳಲ್ಲಿ ಎಲ್ಲರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.