ADVERTISEMENT

‘ಪಾಕ್‌ ಧ್ವಜ ಹಾರಿಸಿದ್ದಾರೆ’ ಎಂದು ಸುಳ್ಳು ಪೋಸ್ಟ್‌: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 16:23 IST
Last Updated 23 ಏಪ್ರಿಲ್ 2024, 16:23 IST
   

ತುಮಕೂರು: ನಗರದಲ್ಲಿ ನಡೆದ ಕಾಂಗ್ರೆಸ್‌ ಪ್ರಚಾರದ ಸಭೆಯಲ್ಲಿ ಪಾಕಿಸ್ತಾನ್‌ ಧ್ವಜ ಹಾರಿಸಿದ್ದಾರೆ ಎಂದು ‘ಎಕ್ಸ್‌’ ಖಾತೆಯಲ್ಲಿ ಸುಳ್ಳು ಪೋಸ್ಟ್‌ ಹಾಕಿದ್ದ ಮುರಳಿ ಪುರಷೋತ್ತಮ್‌ ಎಂಬುವರ ವಿರುದ್ಧ ತಿಲಕ್‌ಪಾರ್ಕ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಇದು ತುಮಕೂರಿನ ಗುಬ್ಬಿ ಗೇಟ್‌ ಬಳಿ ಕಾಂಗ್ರೆಸ್‌ ಸಭೆಯಲ್ಲಿ ಕಂಡು ಬಂದ ಪಾಕಿಸ್ತಾನದ ಧ್ವಜ. ಇದಕ್ಕೆ ರಾಜ್ಯದ ನಾಯಕರು ಏನು ಹೇಳುತ್ತಾರೋ ಕಾದು ನೋಡಬೇಕು. ರಾಜ್ಯದ ಮತದಾರರೇ ನೋಡಿ ಯೋಚಿಸಿ ನಿರ್ಧಾರ ತೆಗೆದುಕೊಂಡು ಮತ ಚಲಾಯಿಸಿ. ದೇಶದ ರಕ್ಷಣೆಗಾಗಿ ನಿಮ್ಮ ಮತ’ ಎಂದು ಮುರಳಿ ಒಂದು ವಿಡಿಯೊ ಹಂಚಿಕೊಂಡಿದ್ದರು.

‘ಇದೊಂದು ಸುಳ್ಳು ಸುದ್ದಿಯಾಗಿದೆ. ಇಂತಹ ಘಟನೆ ನಗರದಲ್ಲಿ ಎಲ್ಲೂ ನಡೆದಿಲ್ಲ. ಇದನ್ನು ಎಲ್ಲ ಕಡೆ ಹಂಚಿಕೊಂಡವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು. ಸುಳ್ಳು ಸುದ್ದಿ ಹರಡದಂತೆ ಎಚ್ಚರಿಕೆ ನೀಡಲಾಗುವುದು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್‌ ತಮ್ಮ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.