ADVERTISEMENT

ತುಮಕೂರು | ಮನೆಯ ಗೋಡೆ ಕುಸಿದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 11:26 IST
Last Updated 23 ಅಕ್ಟೋಬರ್ 2024, 11:26 IST
   

ಗುಬ್ಬಿ: ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ತಾಲ್ಲೂಕಿನ ಕಸಬಾ ಹೋಬಳಿ ಜಿ.ಹೊಸಹಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

ಸಹನ (30) ಮೃತ ಮಹಿಳೆ. ಸತತವಾಗಿ ಬೀಳುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ನೆನೆದು ಕುಸಿದು ಬಿದ್ದಿದೆ.

ಮನೆಯ ಹಿಂಭಾಗದಲ್ಲಿ ಸ್ನಾನ ಮಾಡುತ್ತಿದ್ದ ಸಮಯದಲ್ಲಿ ಗೋಡೆ ಕುಸಿದು ಸಹನ ಅಸ್ವಸ್ಥರಾಗಿದ್ದರು. ಇದನ್ನು ಗಮನಿಸಿದ ಕುಟುಂಬಸ್ಥರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದು, ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.