ADVERTISEMENT

ತುರುವೇಕೆರೆ: ಕುಲಾಂತರಿ ಬೀಜ ನಿಷೇಧಕ್ಕೆ ರೈತರ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2024, 13:59 IST
Last Updated 4 ನವೆಂಬರ್ 2024, 13:59 IST
ತುರುವೇಕೆರೆ ರೈತ ಸಂಘ ಹಾಗೂ ದಲಿತ, ಪ್ರಗತಿಪರ ಸಂಘಟನೆಗಳಿಂದ ತಾಲ್ಲೂಕು ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಯಿತು
ತುರುವೇಕೆರೆ ರೈತ ಸಂಘ ಹಾಗೂ ದಲಿತ, ಪ್ರಗತಿಪರ ಸಂಘಟನೆಗಳಿಂದ ತಾಲ್ಲೂಕು ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಯಿತು   

ತುರುವೇಕೆರೆ: ರೈತರಿಗೆ ಮಾರಕವಾಗಿರುವ ಕುಲಾಂತರಿ ಬೀಜಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ನಿಷೇಧಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ದಲಿತ, ಪ್ರಗತಿ ಪರ ಸಂಘಟನೆಗಳು ತಾಲ್ಲೂಕು ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದವು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್ ಗೌಡ ಮಾತನಾಡಿ, ‘ಕುಲಾಂತರಿ ತಳಿಗಳ ಬೆಳೆಗೆ ಅವಕಾಶ ಮಾಡಿಕೊಡಬಾರದು. ಅನೇಕ ಬಹುರಾಷ್ಟ್ರೀಯ ಕಂಪನಿಗಳು ಕುಲಾಂತರಿ ತಳಿಗಳನ್ನು ಜಾರಿಗೆ ತರುವ ಮೂಲಕ ದೇಶಿಯ ತಳಿಗಳನ್ನು ನಾಶ ಮಾಡಲು ಹೊರಟಿವೆ. ಕುಲಾಂತರಿ ತಳಿಗಳಿಂದ ಮಾರಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ’ ಎಂದರು.

ರೈತ ಸಂಘದ ರಹಮತ್, ದಂಡಿನಶಿವರ ಕುಮಾರ್, ಬೋರಪ್ಪ, ಸಿಐಟಿಯು ಸತೀಶ್, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಾರುತಿ, ಆಟೊಚಾಲಕರ ಸಂಘದ ಗಂಗಣ್ಣ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.