ಕುಣಿಗಲ್: ತಾಲ್ಲೂಕಿನ ಕೊತ್ತಗೆರೆ ಹೋಬಳಿ ಕೊಡಹಳ್ಳಿಪಾಳ್ಯದಲ್ಲಿ ಭಾನುವಾರ ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿ ಬಿದ್ದು, ತಂದೆ ಮತ್ತು ಮಗ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಜಾಣಗೆರೆ ಗ್ರಾಮದ ಶಿವರಾಮಯ್ಯ(52), ಮಗ ಹರೀಶ್ (21) ಮೃತರು. ಶಿವರಾಮಯ್ಯ ಅವರು ಸಾಹಿತಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಾಣಗೆರೆ ವೆಂಕಟರಾಮಯ್ಯ ಅವರ ಸಹೋದರ.
ಟ್ರ್ಯಾಕ್ಟರ್ ನಲ್ಲಿ ಅಡಿಕೆ ಕಾಯಿ ತುಂಬಿಕೊಂಡು ಬರುವಾಗ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.