ಶಿರಾ: ರಾಷ್ಟ್ರೀಯ ಹೆದ್ದಾರಿ-48 ರ ಕಡವಿಗೆರೆ ಸಮೀಪ ಬುಧವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ತಂದೆ, ಮಗ ಮೃತ ಪಟ್ಟಿದ್ದಾರೆ.
ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಗುರುರಾಜ ಅಬ್ಬೀಗೆರೆ (30) ಹಾಗೂ ಅವರ ಮಗ ರಿಶಾಂಕ್ (2) ಮೃತಪಟ್ಟವರು.
ಬೆಂಗಳೂರಿನಿಂದ ಮುಂಡರಗಿಗೆ ಕಾರಿನಲ್ಲಿ ಹೋಗುತ್ತಿದ್ದ ಸಮಯದಲ್ಲಿ ಕಡವಿಗೆರೆ ಸಮೀಪ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಾಗ ಕಾರಿನಲ್ಲಿದ್ದ ಗುರುರಾಜ ಅಬ್ಬೀಗೆರೆ ಹಾಗೂ ರಿಶಾಂಕ್ ಮೃತಪಟ್ಟಿದ್ದಾರೆ. ಕಳ್ಳಂಬೆಳ್ಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.