ADVERTISEMENT

‘ಹೇಮೆ’ ನೀರು ಹರಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 16:25 IST
Last Updated 7 ಜುಲೈ 2024, 16:25 IST
ಸೊಗಡು ಶಿವಣ್ಣ
ಸೊಗಡು ಶಿವಣ್ಣ   

ತುಮಕೂರು: ಹೇಮಾವತಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ನೀರಿನ ಸಂಗ್ರಹ ಮಟ್ಟ ಏರಿಕೆಯಾಗುತ್ತಿದೆ. ಕೂಡಲೇ ಜಿಲ್ಲೆಗೆ ಹೇಮಾವತಿಯಿಂದ ನೀರು ಹರಿಸುವಂತೆ ಮಾಜಿ ಸಚಿವ ಸೊಗಡು ಶಿವಣ್ಣ ಮನವಿ ಮಾಡಿದ್ದಾರೆ.

37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 17 ಟಿಎಂಸಿ ನೀರಿದೆ. ಹಲವು ದಿನಗಳಿಂದ ಚಿಕ್ಕಮಗಳೂರು, ಸಕಲೇಶಪುರ ಹಾಗೂ ಹಾಸನ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಇದರಿಂದ ಜಲಾಶಯಕ್ಕೆ ಹರಿಯುವ ನೀರಿನ ಪ್ರಮಾಣ ಹೆಚ್ಚಾಗಿದೆ. ಕೃಷಿ ಚಟುವಟಿಕೆ ಹಾಗೂ ಕುಡಿಯುವ ಉದ್ದೇಶದಿಂದ ನೀರು ಹರಿಸುವಂತೆ ಒತ್ತಾಯಿಸಿದ್ದಾರೆ.

ಖಾಲಿಯಾದ ಕೆರೆಗಳನ್ನು ತುಂಬಿಸಿ ಜನ–ಜಾನುವಾರು, ಪಕ್ಷಿಗಳ ದಾಹ ತಣಿಸಬೇಕು. ‘ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದೆ’ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ ಈ ಬಾರಿ ನೀರಿಗೆ ಹೆಚ್ಚಿನ ಸಮಸ್ಯೆಯಾಗಲಾರದು. ಈಗಿರುವ ನಾಲೆಯ ಮೂಲಕವೇ ಕುಣಿಗಲ್‌ ತಾಲ್ಲೂಕಿನ ಕೆರೆಗಳಿಗೂ ನೀರು ಹರಿಸಬೇಕು. ಈಗಲೇ ನೀರು ಹರಿಸಿದರೆ ತುಂಬಾ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.