ADVERTISEMENT

ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕೃತಿ ದಹನ

​ಪ್ರಜಾವಾಣಿ ವಾರ್ತೆ
Published 20 ಜೂನ್ 2024, 14:03 IST
Last Updated 20 ಜೂನ್ 2024, 14:03 IST
<div class="paragraphs"><p>ಕೊರಟಗೆರೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ತೈಲ ಬೆಲೆ ಏರಿಕೆ ಖಂಡಿಸಿ ನಡೆಸಿದ ಪ್ರತಿಭಟನಾ ವೇಳೆ ಮಂಡಲ ಅಧ್ಯಕ್ಷ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದರು</p></div>

ಕೊರಟಗೆರೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ತೈಲ ಬೆಲೆ ಏರಿಕೆ ಖಂಡಿಸಿ ನಡೆಸಿದ ಪ್ರತಿಭಟನಾ ವೇಳೆ ಮಂಡಲ ಅಧ್ಯಕ್ಷ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದರು

   

ಕೊರಟಗೆರೆ: ರಾಜ್ಯ ಸರ್ಕಾರದ ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಏಕಾಏಕಿ ಪೆಟ್ರೋಲ್ ಹಾಗೂ ಡೀಸಲ್ ದರ ಹೆಚ್ಚಿಸಿ ಜನರ ಜೀವನಕ್ಕೆ ಹೊರೆ ಮಾಡಿದೆ. ಗ್ಯಾರಂಟಿಗಳನ್ನು ನಿಭಾಯಿಸಲು ನಿತ್ಯ ಬಳಕೆ ವಸ್ತುಗಳ ಬೆಲೆ ಹೆಚ್ಚಳ ಮಾಡಲಾಗುತ್ತಿದೆ. ಇದರಿಂದ ರಾಜ್ಯದ ಸಾಮಾನ್ಯ ಜನರ ಜೀವನ ಸಂಕಷ್ಟಕ್ಕೆ ತಲುಪಿದೆ. ಕೂಡಲೇ ಸರ್ಕಾರ ತೈಲ ಬೆಲೆ ಇಳಿಸಬೇಕು ಎಂದು ಪ್ರತಿಭಟನೆ ನಿರತರು ಆಗ್ರಹಿಸಿದರು.

ADVERTISEMENT

ಪಟ್ಟಣದ ಎಸ್ಎಸ್ಆರ್ ವತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಬಿಜೆಪಿ ಮಂಡಲ ಅಧ್ಯಕ್ಷ ದರ್ಶನ್ ಸೇರಿದಂತೆ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.

ಮಂಡಲ ಅಧ್ಯಕ್ಷ ಡಾ.ಕೆ.ಎಲ್. ದರ್ಶನ್, ಮಾಜಿ ಅಧ್ಯಕ್ಷ ಎಸ್.ಪವನ್ ಕುಮಾರ್, ಮುಖಂಡರಾದ ಎಚ್.ಡಿ.ರಾಮಲಿಂಗಯ್ಯ, ಗುರುದತ್ತ, ವಿಶ್ವನಾಥ ಅಪ್ಪಾಜಪ್ಪ ಮೋಹನ್, ನಾಗರಾಜು, ರಂಗರಾಜು, ರುದ್ರೇಶ್, ಅರಣ್, ಶಿವಕುಮಾರಸ್ವಾಮಿ, ಗಿರೀಶ್ ಗೌಡ, ಚೇತನ್, ಸುರೇಶ್, ದಯಾನಂದ, ಪ್ರದೀಪ್, ಸಿದ್ದಲಿಂಗಯ್ಯ, ಶ್ರೀನಿವಾಸ್, ಆನಂದ್, ನಟರಾಜು, ಪ್ರವೀಣ್ ಕುಮಾರ್, ಹನುಮಂತರಾಜು, ಗೋಪಿನಾಥ್, ಸಿದ್ದರಾಜು, ನಾಗರಾಜು, ರಮೇಶ್, ಚಂದ್ರಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.