ADVERTISEMENT

ತುಮಕೂರು: ಸಿದ್ಧಗಂಗಾ ಮಠಕ್ಕೆ ಗೀತಾ ಶಿವರಾಜ್‌ಕುಮಾರ್‌ ಭೇಟಿ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2024, 16:20 IST
Last Updated 28 ಏಪ್ರಿಲ್ 2024, 16:20 IST
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. ನಟ ಶಿವರಾಜ್‌ಕುಮಾರ್‌ ಹಾಜರಿದ್ದರು
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. ನಟ ಶಿವರಾಜ್‌ಕುಮಾರ್‌ ಹಾಜರಿದ್ದರು    

ತುಮಕೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಅವರು ಭಾನುವಾರ ನಗರದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನದ ನಂತರ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು.

ನಂತರ ಸುದ್ದಿಗಾರರ ಜತೆ ಮಾತನಾಡಿ, ‘ಈ ಬಾರಿ ಶಿವಮೊಗ್ಗದ ಜನ ನನ್ನ ಕೈ ಬಿಡುವುದಿಲ್ಲ ಎಂಬ ನಂಬಿಕೆ ಇದೆ. ಪ್ರಚಾರ ಕಾರ್ಯವೂ ಭರದಿಂದ ಸಾಗುತ್ತಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗದ ಜನರಿಗೆ ತಲುಪಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಆಶಯ ಈಡೇರಿದೆ’ ಎಂದರು.

ಶಿವಮೊಗ್ಗದಲ್ಲಿ ಇಂದಿಗೂ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆಗಿಲ್ಲ. ಬಗರ್‌ಹುಕುಂ, ಕುಡಿಯುವ ನೀರು, ರಸ್ತೆ- ಚರಂಡಿ ಹೀಗೆ ಹಲವು ತೊಂದರೆಗಳಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ADVERTISEMENT

ನಟ ಶಿವರಾಜ್‌ಕುಮಾರ್‌, ‘ಪತಿಯಾಗಿ ಗೀತಾಗೆ ಬೆಂಬಲ ಸೂಚಿಸುವುದು ನನ್ನ ಜವಾಬ್ದಾರಿ. ಈ ಸಲ ಎಲ್ಲ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚುನಾವಣೆಯ ಫಲಿತಾಂಶ ಗೀತಾಳ ಪರವಾಗಿ ಇರಲಿದೆ ಎಂಬ ನಂಬಿಕೆ ಇದೆ. ತಂದೆಯವರು ಮಠದ ಬಗ್ಗೆ ಅಪಾರ ಗೌರವ ಹೊಂದಿದ್ದರು. ಇಲ್ಲಿನ ಪರಿಸರ ನನಗೆ ಇಷ್ಟ’ ಎಂದು ಹೇಳಿದರು.

ಶಿವಮೊಗ್ಗ ಕ್ಷೇತ್ರದ ಉಸ್ತುವಾರಿ ಅನಿಲ್‌ಕುಮಾರ್‌ ತಡಕಲ್‌, ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ವಿಜಯ ರಾಘವೇಂದ್ರ, ಮಠದ ಆಡಳಿತಾಧಿಕಾರಿ ನಾಗರಾಜ, ಮುಖಂಡರಾದ ರಾಧಾ ವಿಜಯ್, ದಯಾನಂದ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.