ADVERTISEMENT

ಶಿರಾ: ಕೇಂದ್ರ ಸಚಿವ ಎಚ್‌ಡಿಕೆಗೆ ಅದ್ದೂರಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 14:11 IST
Last Updated 17 ಜೂನ್ 2024, 14:11 IST
ಶಿರಾದ ರಾಷ್ಟ್ರೀಯ ಹೆದ್ದಾರಿ 48ರ ಕರೇಜವನಹಳ್ಳಿ ಟೋಲ್‌ಗೇಟ್ ಬಳಿ ಕಾರ್ಯಕರ್ತರನ್ನು ಉದ್ದೇಶಿಸಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು
ಶಿರಾದ ರಾಷ್ಟ್ರೀಯ ಹೆದ್ದಾರಿ 48ರ ಕರೇಜವನಹಳ್ಳಿ ಟೋಲ್‌ಗೇಟ್ ಬಳಿ ಕಾರ್ಯಕರ್ತರನ್ನು ಉದ್ದೇಶಿಸಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು   

ಶಿರಾ: ಕೇಂದ್ರ ಸಚಿವರಾದ ನಂತರ ಪ್ರಥಮ ಬಾರಿಗೆ ಸೋಮವಾರ ನಗರಕ್ಕೆ ಆಗಮಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು.

ರಾಷ್ಟ್ರೀಯ ಹೆದ್ದಾರಿ 48ರ ಕರೇಜವನಹಳ್ಳಿ ಟೋಲ್‌ಗೇಟ್ ಬಳಿ ಕಾರ್ಯಕರ್ತರು ಸ್ವಾಗತಿಸಿದರು. ಬೃಹತ್ ಗಾತ್ರದ ಕೊಬ್ಬರಿ ಹಾರ ಹಾಕಿ, ಪಟಾಕಿ ಸಿಡಿಸಿ ಸ್ವಾಗತಿಸಲಾಯಿತು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ‘ಕಾರ್ಯಕರ್ತರ ಪರಿಶ್ರಮದಿಂದ ಇಂದು ಕೇಂದ್ರ ಸಚಿವನಾಗಿದ್ದೇನೆ. ನನ್ನ ಪರಿಶ್ರಮದ ಪ್ರತಿಫಲ ಎಲ್ಲಾ ರಾಜ್ಯದ ಜನತೆಗೆ ಸೇರುತ್ತದೆ. ನಿಮ್ಮ ಸಹಕಾರದಿಂದ ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಿರುವುದು ಸಂತಸದ ವಿಷಯವಾಗಿದೆ’ ಎಂದರು.

ADVERTISEMENT

‘ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವನಾದರೂ ರೈತರನ್ನು ಮರೆಯುವುದಿಲ್ಲ. ಅವರ ಪರವಾಗಿ ಕೆಲಸ ಮಾಡುತ್ತೇನೆ. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ದೊರೆಯುವಂತೆ ಮಾಡಲು ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ’ ಎಂದರು.

ಮಾಜಿ ಸಚಿವ ಸೊಗಡು ಶಿವಣ್ಣ, ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಆರ್.ಉಗ್ರೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಮುಡಿಮಡು ರಂಗಶ್ವಾಮಯ್ಯ, ಕಲ್ಲೆರೆ ರವಿಕುಮಾರ್, ಸತ್ಯಪ್ರಕಾಶ್, ಮುಡಿಮಡು ಮಂಜುನಾಥ್ ಇದ್ದರು.

ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹೇಶ್ವರ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿ, ನಂಜಾವಧೂತ ಸ್ವಾಮೀಜಿ ಅವರನ್ನು ಭೇಟಿಯಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.