ADVERTISEMENT

ಗುಬ್ಬಿ: ದಾಖಲೆ ಇಲ್ಲದ ₹3.45 ಲಕ್ಷ ಜಪ್ತಿ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2024, 15:15 IST
Last Updated 8 ಏಪ್ರಿಲ್ 2024, 15:15 IST
<div class="paragraphs"><p>ವಶ ಪಡಿಸಿಕೊಳ್ಳಲಾಗಿರುವ ಹಣ–ಸಾಂದರ್ಭಿಕ ಚಿತ್ರ</p></div>

ವಶ ಪಡಿಸಿಕೊಳ್ಳಲಾಗಿರುವ ಹಣ–ಸಾಂದರ್ಭಿಕ ಚಿತ್ರ

   

ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿಯ ಕಲ್ಲೂರು ಕ್ರಾಸ್‌ನ ಚೆಕ್‌ಪೋಸ್ಟ್‌ ಬಳಿ ಸೋಮವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹3.45 ಲಕ್ಷ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ತಿರುಮಲಪುರ ಗ್ರಾಮದಿಂದ ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಅನಗುಂದಕ್ಕೆ ತೆರಳುತ್ತಿದ್ದ ಬೊಲೆರೊ ವಾಹನದಲ್ಲಿ ಹಣ ತೆಗೆದುಕೊಂಡು ಹೋಗುತ್ತಿದ್ದರು. ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ಮಾಡಿದಾಗ ಹಣ ಸಿಕ್ಕಿದೆ.

ADVERTISEMENT

‘ಹಣವನ್ನು ತಾಲ್ಲೂಕು ಖಜಾನೆಯ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಎಫ್‌ಐಆರ್‌ ದಾಖಲಿಸಲಾಗುವುದು’ ಎಂದು ಸಹಾಯಕ ಚುನಾವಣಾ ಅಧಿಕಾರಿ ಜಂಬಗಿ ರೇಣುಕಪ್ರಸಾದ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.