ADVERTISEMENT

ವಿದ್ಯುತ್‌ ಪರಿವರ್ತಕದ ಹೆಸರಿನಲ್ಲಿ ಸುಲಿಗೆ: ಕುಮಾರಸ್ವಾಮಿ ವಾಗ್ದಾಳಿ

ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2024, 14:27 IST
Last Updated 13 ಏಪ್ರಿಲ್ 2024, 14:27 IST
ಚಿಕ್ಕನಾಯಕನಹಳ್ಳಿಯಲ್ಲಿ ಬಹಿರಂಗ ಸಭೆಯ ಉದ್ಘಾಟನೆ ಸಂದರ್ಭ
ಚಿಕ್ಕನಾಯಕನಹಳ್ಳಿಯಲ್ಲಿ ಬಹಿರಂಗ ಸಭೆಯ ಉದ್ಘಾಟನೆ ಸಂದರ್ಭ   

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಶನಿವಾರ ಬಿಜೆಪಿ– ಜೆಡಿಎಸ್‌ ಬಹಿರಂಗ ಪ್ರಚಾರ ಸಭೆ ನಡೆಯಿತು.

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿಗಳ ಹೆಸರಿನಲ್ಲಿ ಜನರನ್ನು ಮರಳು ಮಾಡುತ್ತಿದೆ. ರೈತರ ಕೊಳವೆ ಬಾವಿ ಸಂಪರ್ಕ ಮತ್ತು ಪರಿವರ್ತಕಗಳ ಶುಲ್ಕವನ್ನು ಹೆಚ್ಚಿಸಿ, ರೈತರಿಂದ ವಸೂಲಿ ಮಾಡುತ್ತಿದೆ ಎಂದು ದೂರಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಈ ಬಾರಿಯ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ನೆಲೆ ಕಳೆದುಕೊಳ್ಳಲಿದೆ ಎಂದರು.

ADVERTISEMENT

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೀಡುತ್ತಿರುವ ಅನುದಾನದ ವಿಚಾರದಲ್ಲೂ ರಾಜಕೀಯ ಮಾಡುವ ಕಾಂಗ್ರೆಸ್ಸಿಗರು, ಸದಾ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನದಲ್ಲೇ ಇರುತ್ತಾರೆ ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮಾತನಾಡಿ, ‘ನರೇಂದ್ರ ಮೋದಿ ಅವರ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವಲ್ಲಿ ಕ್ಷೇತ್ರದ ಮತದಾರರು ಪಾಲುದಾರರಾಗಬೇಕು’ ಎಂದು ಹೇಳಿದರು.

ಎಚ್ ಡಿ ಕುಮಾರಸ್ವಾಮಿ

ಶಾಸಕ ಸಿ.ಬಿ. ಸುರೇಶ್ ಬಾಬು ಮಾತನಾಡಿ, ಬಿಜೆಪಿ ಅಥವಾ ಜೆಡಿಎಸ್ ಎಂಬ ಪಕ್ಷಬೇಧ ತೊರೆದು ಎಲ್ಲರೂ ಮತ ನೀಡುವ ಮೂಲಕ ನರೇಂದ್ರ ಮೋದಿಗೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು.

ಕಾರ್ಯಕರ್ತರು ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.