ತುಮಕೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ನಗರದ ಹರಿಕರಸುಧಾನ್ ಎಂಬಾತನಿಗೆ ಪೋಕ್ಸೊ ನ್ಯಾಯಾಲಯ ₹50 ಸಾವಿರ ದಂಡ ವಿಧಿಸಿದೆ.
ಬಿರಿಯಾನಿ ಕೊಡುತ್ತೇನೆ ಎಂದು ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದ. ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ರಾಧಾಕೃಷ್ಣ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರು ಬುಧವಾರ ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಕಾರಣ ದಂಡ ವಿಧಿಸಿ, ಸದರಿ ಹಣವನ್ನು ಬಾಲಕಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಕೆ.ಎಸ್.ಆಶಾ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.