ADVERTISEMENT

ತಿಪಟೂರು | ‘ಹೇಮಾವತಿ ನಾಲೆಯಿಂದ ನೀರು ಹರಿಸಿ’

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 14:19 IST
Last Updated 25 ಜುಲೈ 2024, 14:19 IST

ತಿಪಟೂರು: ಹೇಮಾವತಿ ನಾಲೆಯಿಂದ ತಾಲ್ಲೂಕಿನ ಈಚನೂರು ಕೆರೆ, ಅಮಾನಿಕೆರೆ ಮತ್ತು ಕೆರೆಕಟ್ಟೆಗಳಿಗೆ ತಕ್ಷಣವೇ ನೀರು ಹರಿಸಬೇಕು ಎಂದು ಮಾಜಿ ಸಚಿವ ಬಿ.ಸಿ ನಾಗೇಶ್ ಒತ್ತಾಯಿಸಿದ್ದಾರೆ.

ಕಳೆದ ವರ್ಷ ತೀವ್ರ ಬರದಿಂದ ನಲುಗಿದ್ದು, ಕೆರೆ ಕಟ್ಟೆಗಳು ನೀರಿಲ್ಲದೆ ಬತ್ತಿ ಹೋಗಿದ್ದವು. ಹನಿ ನೀರಿಗೂ ಪರಿತಪಿಸುವಂತಾಗಿತ್ತು. ಕಳೆದ ವರ್ಷದ ನಿರ್ಲಕ್ಷ್ಯದಿಂದ ಈಚನೂರು ಕೆರೆಗೆ ನೀರು ತುಂಬಿಸದ ಪರಿಣಾಮ ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿತ್ತು. ಈ ಬಾರಿ ಅದೇ ಪರಿಸ್ಥಿತಿಗೆ ಅವಕಾಶ ಮಾಡಿಕೊಡದೆ ಹೆಚ್ಚುವರಿ ಪಂಪ್‌ ಅಳವಡಿಸಿ ನೀರು ತುಂಬಿಸುವ ಕಾರ್ಯಕ್ಕೆ ಕ್ರಮ ಕೈಗೊಂಡು ನಗರಕ್ಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.

ಹೇಮಾವತಿ ನೀರನ್ನು ಕೆರೆ– ಕಟ್ಟೆಗಳಿಗೆ ಹರಿಸುವ ವಿಚಾರದಲ್ಲಿ ನಿರ್ಲಕ್ಷ್ಯವಹಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.