ಕುಣಿಗಲ್: ದೊಡ್ಡಕೆರೆಗೆ ಹೇಮಾವತಿ ನೀರು ಶುಕ್ರವಾರ ಸಂಜೆ ಹರಿದು ಬಂದಿದ್ದು, ಶಾಸಕ ಡಾ.ರಂಗನಾಥ್ ಗಂಗಾಪೂಜೆ ನೆರವೇರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಬಿಜೆಪಿ ಸರ್ಕಾರದಲ್ಲಿ ತಾಲ್ಲೂಕಿಗೆ ಹೇಮಾವತಿ ನೀರು ಹರಿಸಲು ಹೋರಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ನೆರವಿನಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ಬಾರಿಗೆ ತಾಲ್ಲೂಕಿಗೆ ನೀರನ್ನು ಹರಿಸಿದ ನಂತರ ಜಿಲ್ಲೆಯ ಇತರ ಕೆರೆಗಳಿಗೆ ನೀರು ಹರಿಸುವ ಕಾರ್ಯನಡೆಯಲಿದೆ ಎಂದರು.
ಮಳೆಯ ಕೊರತೆ ಇರುವುದರಿಂದ ನೀರನ್ನು ಎಚ್ಚರಿಕೆಯಿಂದ ಬಳಸಬೇಕಿದೆ. ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯಕ್ಕೂ ನೀರು ಹರಿಸಲು ಕ್ರಮತೆಗೆದುಕೊಳ್ಳಲಾಗುವುದು. ನನೆಗುದಿಗೆ ಬಿದ್ದಿದ್ದ ಮಾರ್ಕೋನಹಳ್ಳಿ ಮಂಗಳ ಜಲಾಶಯದ ಸಂಪರ್ಕ ಕಾಲುವೆ ಕಾಮಗಾರಿ ಶೇ 60ರಷ್ಟು ಪೂರ್ಣಗೊಂಡಿದೆ. ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ಹೇಮಾವತಿ ನಾಲಾ ವಲಯದ ಇಇ ಕೃಷ್ಣ, ಎಇಇ ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಮುಖಂಡರಾದ ಹಾಲುವಾಗಿಲು ಸ್ವಾಮಿ, ಬಿ.ಕೆ.ರಾಮಣ್ಣ, ಪುರಸಭೆ ಸದಸ್ಯ ರಂಗಸ್ವಾಮಿ, ಸೆಮ್ಮಿಉಲ್ಲಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.