ADVERTISEMENT

ದತ್ತು ಕೇಂದ್ರದಲ್ಲಿದ್ದ ಎಚ್‌ಐವಿ ಸೋಂಕಿತ ಮಕ್ಕಳು ಸಾವು

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2024, 12:41 IST
Last Updated 6 ಏಪ್ರಿಲ್ 2024, 12:41 IST
<div class="paragraphs"><p>ಸಾವು (ಸಾಂಕೇತಿಕ ಚಿತ್ರ)</p></div>

ಸಾವು (ಸಾಂಕೇತಿಕ ಚಿತ್ರ)

   

ಕುಣಿಗಲ್: ತಾಯಂದಿರಿಂದ ಪರಿತ್ಯಕ್ತರಾಗಿ ದತ್ತು ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಚ್‌ಐವಿ ಸೋಂಕಿತ ಮಕ್ಕಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಎಚ್‌ಐವಿ ಸೋಂಕಿತ ತಾಯಂದಿರ ಅಸಹಾಯಕತೆಯಿಂದಾಗಿ ಜಿಲ್ಲೆಯ ಗಡಿ ಭಾಗದ (ಪಾವಗಡ) ಒಂದೂವರೆ ವರ್ಷದ ಮಗು ಮತ್ತು ಚಿಕ್ಕಬಳ್ಳಾಪುರದ ಜಿಲ್ಲೆಯ ಎರಡು ತಿಂಗಳ ಗಂಡು ಮಗು ಸೋಂಕಿತರಾಗಿದ್ದರು.

ADVERTISEMENT

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಆದೇಶದ ಮೇರೆಗೆ ಮಕ್ಕಳ ರಕ್ಷಣೆ ಮತ್ತು ಪೋಷಣೆಗೆ ತಾಲ್ಲೂಕಿನ ದಯಾಕಿರಣ ದತ್ತು ಕೇಂದ್ರದ ವಶಕ್ಕೆ ನೀಡಲಾಗಿತ್ತು.

ಎಚ್‌ಐವಿ ಹಾಗೂ ಅಪೌಷ್ಟಿಕತೆಯಿಂದಾಗಿ ಮಕ್ಕಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರ್ಚ್‌ 23 ಮತ್ತು 26ರಂದು ಮಕ್ಕಳು ಮೃತಪಟ್ಟಿದ್ದಾರೆ.

ದಯಾಕಿರಣ ದತ್ತು ಕೇಂದ್ರದ ಸಂಯೋಜಕ ರಮೇಶ್ ನೀಡಿದ ದೂರಿನ ಮೇರೆಗೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಕಾಲದಲ್ಲಿ ಚಿಕಿತ್ಸೆ ಪಡೆದಿದ್ದರೆ ಮಕ್ಕಳು ಉಳಿಯುತ್ತಿದ್ದರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.