ADVERTISEMENT

ಅಕ್ರಮ ಆಸ್ತಿ: ನಾಲ್ಕು ವರ್ಷ ಶಿಕ್ಷೆ, ₹1.40 ಕೋಟಿ ದಂಡ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2024, 23:49 IST
Last Updated 14 ಫೆಬ್ರುವರಿ 2024, 23:49 IST
<div class="paragraphs"><p>ಜೈಲು(ಸಾಂದರ್ಭಿಕ ಚಿತ್ರ)</p></div>

ಜೈಲು(ಸಾಂದರ್ಭಿಕ ಚಿತ್ರ)

   

ತುಮಕೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ತಿಪಟೂರು ತಾಲ್ಲೂಕು ಬೆನ್ನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಎಚ್.ಬಸಪ್ಪ ಅವರಿಗೆ ನಾಲ್ಕು ವರ್ಷ ಶಿಕ್ಷೆ ಮತ್ತು ₹1.40 ಕೋಟಿ ದಂಡ ವಿಧಿಸಲಾಗಿದೆ.

ಬುಧವಾರ 7ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ಆದೇಶ ಹೊರಬಿದ್ದ ನಂತರ ಬಸಪ್ಪ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ತಿಪಟೂರು ತಾಲ್ಲೂಕು ರಾಮಶೆಟ್ಟಿಹಳ್ಳಿ ಗ್ರಾಮದ ಬಸಪ್ಪ ಸದ್ಯ ನಿವೃತ್ತರಾಗಿದ್ದಾರೆ.

ADVERTISEMENT

ಅಕ್ರಮ ಆಸ್ತಿ ಸಂಪಾದನೆ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು 2014ರಲ್ಲಿ ಬಸಪ್ಪ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದರು. ಒಟ್ಟು ₹1.93 ಕೋಟಿ ಮೊತ್ತದ ಆಸ್ತಿ ಪತ್ತೆಯಾಗಿತ್ತು. ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಲೋಕಾಯುಕ್ತ ಪರ ಆರ್.ಪಿ.ಪ್ರಕಾಶ್ ವಾದ ಮಂಡಿಸಿದ್ದರು. ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಎಂ.ಶಿವಕುಮಾರ್ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.