ADVERTISEMENT

ತುಮಕೂರು | ಉದ್ಯೋಗ ಮೇಳ: 203 ಮಂದಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2024, 7:14 IST
Last Updated 7 ಆಗಸ್ಟ್ 2024, 7:14 IST
ತುಮಕೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು‌
ತುಮಕೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು‌   

ತುಮಕೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಉದ್ಯೋಗ ಮೇಳದಲ್ಲಿ 203 ಮಂದಿ ವಿವಿಧ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹುಟ್ಟು ಹಬ್ಬದ ಅಂಗವಾಗಿ ಹಾಲಪ್ಪ ಪ್ರತಿಷ್ಠಾನ, ಕೌಶಲ ಕರ್ನಾಟಕ, ಕೆಎಸ್‌ಎಫ್‌ಸಿ, ಸಿಡಾಕ್‌ ಇತರೆ ಸಂಸ್ಥೆಗಳ ಸಹಯೋಗದಲ್ಲಿ ಮೇಳ ಆಯೋಜಿಸಲಾಗಿತ್ತು.

34 ವಿವಿಧ ಕಂಪನಿಗಳು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದವು. 3,906 ಜನ ಅಭ್ಯರ್ಥಿಗಳು ಭಾಗವಹಿಸಿದ್ದರು. 390 ಜನರನ್ನು ತರಬೇತಿಗಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. 207 ಜನರಿಗೆ ಎರಡನೇ ಸಂದರ್ಶನಕ್ಕೆ ಅವಕಾಶ ಕಲ್ಪಿಸಿವೆ.

ADVERTISEMENT

ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ಮೇಳಕ್ಕೆ ಚಾಲನೆ ನೀಡಿ ಮಾತನಾಡಿ, ‘ಖಾಸಗಿ ಕಾಲೇಜುಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ ಸಂದರ್ಶನ ಏರ್ಪಡಿಸಿ ಉದ್ಯೋಗ ಅವಕಾಶ ಕಲ್ಪಿಸಲಾಗುತ್ತದೆ. ಸರ್ಕಾರಿ ಕಾಲೇಜುಗಳ ಮಕ್ಕಳಿಗೂ ಇಂತಹ ಅವಕಾಶ ದೊರೆಯಬೇಕೆಂಬ ಉದ್ದೇಶದಿಂದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ’ ಎಂದು ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ತರನಂ ನಿಖೆತ್‌, ‘ಕಾಲೇಜಿನ 4 ಸಾವಿರ ವಿದ್ಯಾರ್ಥಿಗಳಲ್ಲಿ ಬಹುತೇಕರು ಗ್ರಾಮೀಣ ಭಾಗದವರು. ಬೆಳಗ್ಗೆ ಕಾಲೇಜಿಗೆ ಬಂದು ಸಂಜೆಯವರೆಗೆ ಇರುತ್ತಾರೆ. ಸಂಘ–ಸಂಸ್ಥೆಗಳು ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ಮಾಡಿದರೆ ಅನುಕೂಲವಾಗಲಿದೆ’ ಎಂದು ಮನವಿ ಮಾಡಿದರು.

ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್‌ ಕುಮಾರ್, ಡಿಐಸಿ ಉಪನಿರ್ದೇಶಕ ಸಿ.ಕೆ.ನಾಗರಾಜು, ಕೆಎಸ್‍ಎಫ್‍ಸಿ ಸಹಾಯಕ ವ್ಯವಸ್ಥಾಪಕ ವಿ.ಗೋಪಾಲಕೃಷ್ಣ, ಪ್ರಾಧ್ಯಾಪಕರಾದ ತಿಪ್ಪೇಸ್ವಾಮಿ, ಕೃಷ್ಣನಾಯ್ಕ, ಕೆ.ಎಚ್.ಅನಿತಾಲಕ್ಷ್ಮಿ, ಟಿ.ಎನ್.ವಸಂತಕುಮಾರಿ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.