ADVERTISEMENT

ಕಂಬದ ರಂಗನಾಥ ಹೂವಿನ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 5:22 IST
Last Updated 27 ಫೆಬ್ರುವರಿ 2024, 5:22 IST
ಶಿರಾ ತಾಲ್ಲೂಕಿನ ಮಾಗೋಡು ಗೊಲ್ಲರಹಟ್ಟಿಯಲ್ಲಿ ಸೋಮವಾರ ನಡೆದ ಕಂಬದ ರಂಗನಾಥ ಹೂವಿನ ರಥೋತ್ಸವ
ಶಿರಾ ತಾಲ್ಲೂಕಿನ ಮಾಗೋಡು ಗೊಲ್ಲರಹಟ್ಟಿಯಲ್ಲಿ ಸೋಮವಾರ ನಡೆದ ಕಂಬದ ರಂಗನಾಥ ಹೂವಿನ ರಥೋತ್ಸವ   

ಶಿರಾ: ತಾಲ್ಲೂಕಿನ ಮಾಗೋಡು ಗೊಲ್ಲರಹಟ್ಟಿಯಲ್ಲಿ ಕಂಬದ ರಂಗನಾಥ ಹೂವಿನ ರಥೋತ್ಸವ ಸೋಮವಾರ ಅದ್ದೂರಿಯಾಗಿ ನಡೆಯಿತು.

ಮಾಗೋಡು ಕಂಬದ ರಂಗನಾಥ ದೇವರಿಗೆ ಹೂವೇ ಪ್ರಿಯವಾದ ವಸ್ತುವಾಗಿದೆ. ಹೂವಿನ ಹಾರವನ್ನು ತೇರಿಗೆ ಹಾಕುವುದು ವಾಡಿಕೆ ಮಾತ್ರವಲ್ಲ, ಭಕ್ತರು ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ಹರಕೆಯ ರೂಪದಲ್ಲಿ ಹೂವನ್ನು ಅರ್ಪಿಸುವುದು ಸಂಪ್ರದಾಯ. ತಮ್ಮ ಇಷ್ಟಾರ್ಥ ಪ್ರಾಪ್ತಿಯಾಗಿ ಹರಕೆಗಳು ಫಲಿಸಿದಾಗ ತಮ್ಮ ತೂಕದ ಹೂವಿನ ತುಲಾಭಾರ ನೀಡುವುದು ಹಿಂದಿನಿಂದ ನಡೆದುಕೊಂಡು ಬಂದಿರುವ ವಾಡಿಕೆ.

ರಥೋತ್ಸವದಲ್ಲಿ ಪಕ್ಕದ ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ಇತರೆಡೆಗಳಿಂದಲೂ ಆಗಮಿಸಿದ್ದ ಭಕ್ತರು ಬಿಸಿಲನ್ನು ಲೆಕ್ಕಿಸದೆ ರಥೋತ್ಸವದಲ್ಲಿ ಭಾಗವಹಿಸಿ ತಮ್ಮ ಭಕ್ತಿಯನ್ನು ಸಮರ್ಪಿಸಿದರು.

ADVERTISEMENT
ಶಿರಾ ತಾಲ್ಲೂಕಿನ ಮಾಗೋಡು ಗೊಲ್ಲರಹಟ್ಟಿಯಲ್ಲಿ ಸೋಮವಾರ ನಡೆದ ಕಂಬದ ರಂಗನಾಥ ಹೂವಿನ ರಥೋತ್ಸವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.