ADVERTISEMENT

ಕನ್ನಡದ ಉಳಿವು ನಮ್ಮ ಜವಾಬ್ದಾರಿ: ಜಿ.ಪರಮೇಶ್ವರ

ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 21 ಜುಲೈ 2024, 4:13 IST
Last Updated 21 ಜುಲೈ 2024, 4:13 IST
<div class="paragraphs"><p>ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶನಿವಾರ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಚಾಲನೆ ನೀಡಿದರು. </p></div>

ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶನಿವಾರ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಚಾಲನೆ ನೀಡಿದರು.

   

ತುಮಕೂರು: ಮಾತೃ ಭಾಷೆ ಕನ್ನಡ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶನಿವಾರ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಚಾಲನೆ ನೀಡಿ ಮಾತನಾಡಿದರು.

ADVERTISEMENT

ಕನ್ನಡ ಸುಂದರ, ಸಿರಿವಂತ ಭಾಷೆ. ಸುಮಾರು 2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಪ್ರಾಚೀನ ಭಾಷೆ. ಯುವ ಸಮುದಾಯಕ್ಕೆ ಕನ್ನಡ ಭಾಷೆಯ ಹಿರಿಮೆ-ಗರಿಮೆ, ನಾಡು-ನುಡಿ, ನೆಲ-ಜಲ ಸಂರಕ್ಷಣೆಯ ಬಗ್ಗೆ ಪರಿಚಯಿಸುವ ಉದ್ದೇಶದಿಂದ ರಥಯಾತ್ರೆ ಆರಂಭಿಸಲಾಗಿದೆ. ಅನ್ಯಭಾಷಿಕರಲ್ಲಿಯೂ ಕನ್ನಡದ ಬಗ್ಗೆ ಅಭಿಮಾನ ಮೂಡಿಸುವ ಪ್ರಯತ್ನವಾಗಿದೆ ಎಂದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ರಥಯಾತ್ರೆಯು ಭಾನುವಾರ ಶಿರಾ ತಲುಪಿ, ಜುಲೈ 22ರಂದು ಪಾವಗಡ, 23ರಂದು ಮಧುಗಿರಿ, 24ರಂದು ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿಯಲ್ಲಿ ಸಂಚರಿಸಲಿದೆ. ನಂತರ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿಗೆ ಬೀಳ್ಕೊಡಲಾಗುತ್ತದೆ’ ಎಂದು ತಿಳಿಸಿದರು.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿ, ಜಿಲ್ಲಾ ಅಧ್ಯಕ್ಷ ಕೆ.ಎಸ್‌.ಸಿದ್ಧಲಿಂಗಪ್ಪ, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್‌, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಉಪವಿಭಾಗಾಧಿಕಾರಿ ಗೌರವ್‌ಕುಮಾರ್‌ ಶೆಟ್ಟಿ, ತಹಶೀಲ್ದಾರ್ ಎಂ.ಸಿದ್ದೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಜಾನಪದ ಅಕಾಡೆಮಿ ಸದಸ್ಯ ಕೆಂಕೆರೆ ಮಲ್ಲಿಕಾರ್ಜುನ್‌ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.