ADVERTISEMENT

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2024, 14:15 IST
Last Updated 7 ಫೆಬ್ರುವರಿ 2024, 14:15 IST

ಶಿರಾ: ವಸತಿ ಶಾಲೆಗಳ ಸ್ಥಿತಿಗತಿ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವರದಿಯನ್ನಾಧರಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಈ ಬಗ್ಗೆ 7 ದಿನಗಳಲ್ಲಿ ವರದಿ ನೀಡುವಂತೆ ಪತ್ರ ಬರೆದಿದ್ದಾರೆ.

ತಾಲ್ಲೂಕಿನ ಬಹುತೇಕ ಶಾಲೆಗಳಲ್ಲಿ ಸಿಬ್ಬಂದಿ ಕೊರತೆಯಿಂದ ಗುಣಮಟ್ಟದ ಕಲಿಕೆಗೆ ತಡೆಯೊಡ್ಡಿದೆ ಎಂಬ ವಸ್ತು ಸ್ಥಿತಿಯ ವರದಿ ಅಡಿಯಲ್ಲಿ ತಾಲ್ಲೂಕಿನಲ್ಲಿರುವ ಎಂಟು ವಸತಿ ಶಾಲೆಗಳಲ್ಲಿ ಏಳರಲ್ಲಿ ಕಾಯಂ ವಾರ್ಡನ್‌ ಇಲ್ಲವೆಂದು ಶಿಕ್ಷಕರ ಮತ್ತು ಸಿಬ್ಬಂದಿ ಕೊರತೆ ನೀಗಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜನವರಿ 4ರ ಪ್ರಜಾವಾಣಿ ಪತ್ರಿಕೆಯ ವರದಿಯಲ್ಲಿ ಉಲ್ಲೇಖಿತವಾಗಿರುವ ವರದಿಯನ್ನಾಧರಿಸಿ, ಆಯೋಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.

ತಾಲ್ಲೂಕಿನಲ್ಲಿರುವ ಎಂಟು ವಸತಿ ಶಾಲೆಗಳಲ್ಲಿ ಅಗತ್ಯವಿರುವ ಶಿಕ್ಷಕರು ಮತ್ತು ಸಿಬ್ಬಂದಿ ಕೊರತೆ ನಿವಾರಿಸಿಲು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ ಈ ಪತ್ರ ತಲುಪಿದ ಏಳು ದಿನಗಳ ಒಳಗಾಗಿ ಸಲ್ಲಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಕೋರಿದ್ದಾರೆ ಎಂದು ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.