ADVERTISEMENT

ಮತದಾನದ ಮಹತ್ವ ಅರಿಯಿರಿ: ನ್ಯಾಯಾಧೀಶರಾದ ಸಂಗ್ರೇಶಿ ಅಭಿಮತ

ಮತದಾರರ ದಿನಾಚರಣೆಯಲ್ಲಿ ನ್ಯಾಯಾಧೀಶರಾದ ಸಂಗ್ರೇಶಿ ಅಭಿಮತ

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 5:10 IST
Last Updated 26 ಜನವರಿ 2021, 5:10 IST
ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಕಡ್ಡಾಯ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು
ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಕಡ್ಡಾಯ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು   

ತುಮಕೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವವಾದುದು ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಜಿ.ಎಸ್. ಸಂಗ್ರೇಶಿ ತಿಳಿಸಿದರು.

ಜಿಲ್ಲಾಡಳಿತದ ಸಹಯೋಗದಲ್ಲಿ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ 11ನೇ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪಾರದರ್ಶಕ ಆಡಳಿತ ವ್ಯವಸ್ಥೆ ರೂಪಿಸಲು ಸಂವಿಧಾನವು ನಮಗೆ ಅತ್ಯಮೂಲ್ಯವಾದ ಮತದಾನದ ಹಕ್ಕು ನೀಡಿದೆ. 18 ವರ್ಷ ತುಂಬಿದ ಪ್ರತಿಯೊಬ್ಬ ಯುವಕ, ಯುವತಿಯರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.

ADVERTISEMENT

ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಶೆಟ್ಟಿಗಾರ್, ಜಾತಿ, ಮತ, ಲಿಂಗ ತಾರತಮ್ಯ ಬದಿಗೊತ್ತಿ ಮತದಾನದ ಹಕ್ಕು ನೀಡಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ. ರಾಕೇಶ್ ಕುಮಾರ್, ‘ಮತದಾನದ ಹಕ್ಕನ್ನು ನಾವು ಸೂಕ್ತವಾಗಿ ಚಲಾಯಿಸಿದಾಗ ಮಾತ್ರ ಗಣರಾಜ್ಯೋತ್ಸವ ಆಚರಣೆಗೆ ಅರ್ಥ ಬರುತ್ತದೆ. ಸೂಕ್ತ ಅಭ್ಯರ್ಥಿ ಇಲ್ಲದಿದ್ದರೂ ನಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ಸಲುವಾಗಿ ಚುನಾವಣಾ ಆಯೋಗವು ಮತಪತ್ರದಲ್ಲಿ ‘ನೋಟಾ’ ಆಯ್ಕೆ ಮಾಡಿ ಮತ ಚಲಾಯಿಸಲು ಅವಕಾಶ ನೀಡಿದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಉಪ ವಿಭಾಗಾಧಿಕಾರಿ ವಿ. ಅಜಯ್, ಡಿಡಿಪಿಐ ಸಿ. ನಂಜಯ್ಯ, ಡಿಡಿಪಿಯು ನರಸಿಂಹಮೂರ್ತಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಟಿ.ಕೆ. ರಮೇಶ್, ಚುನಾವಣಾ ಶಾಖೆಯ ನಾಗಭೂಷಣ್ ಇದ್ದರು.

ಹೊಸದಾಗಿ ಮತದಾನದ ಹಕ್ಕು ಪಡೆಯಲು ನೋಂದಾಯಿತರಾಗಿದ್ದ ಯುವ ಮತದಾರರಿಗೆ ಮತದಾರರ ಗುರುತಿನ ಕಾರ್ಡ್ ವಿತರಿಸಲಾಯಿತು. ಮತದಾನ ಜಾಗೃತಿ ಕುರಿತು ಹಮ್ಮಿಕೊಂಡಿದ್ದ ಸ್ವರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.