ಕುಣಿಗಲ್: ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದ ನಾಲ್ಕು ಜನ ಆರೋಪಿಗಳನ್ನು ವಲಯ ಅರಣ್ಯಾಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿಯ ಹೊಂಬಾಳಮ್ಮ ಪೇಟೆಯ ರಂಗನಾಥ, ರಾಮಕೃಷ್ಣ, ಶಿವಶಂಕರ, ರಂಗನಾಥ ಬಂಧಿತರು.
ತಾಲ್ಲೂಕಿನ ಕಾಡರಾಮನಹಳ್ಳಿಯ ಖಾಸಗಿ ವ್ಯಕ್ತಿಯ ಜಮೀನಿನ ಮರದಲ್ಲಿದ್ದ ಎಂಟು ಬಾವಲಿಗಳನ್ನು ಹೊಡೆದು ಹಾಕಿದ್ದರು. ಖಚಿತ ಮಾಹಿತಿ ಮೇರೆಗೆ ಹುಲಿಯೂರುದುರ್ಗ ವಲಯ ಅರಣ್ಯ ಅಧಿಕಾರಿ ಜಗದೀಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮೃತ ಬಾವಲಿಗಳನ್ನು ವಶಕ್ಕೆ ಪಡೆದು, ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.