ADVERTISEMENT

‘ಸಕಾರಾತ್ಮಕ ಮನೋಭಾವ ರೂಢಿಸಿಕೊಳ್ಳಿ’

ಐಪಿಎಸ್‌ ಅಧಿಕಾರಿ ರವಿ ಚನ್ನಣ್ಣನವರ್‌ ಸಲಹೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 3:12 IST
Last Updated 13 ಜೂನ್ 2024, 3:12 IST
<div class="paragraphs"><p>ತುಮಕೂರು ವಿಶ್ವವಿದ್ಯಾಲಯದಲ್ಲಿ ಬುಧವಾರ&nbsp;ಕಲಾ ಕಾಲೇಜಿನಿಂದ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗದ ಪೊಲೀಸ್ </p></div>

ತುಮಕೂರು ವಿಶ್ವವಿದ್ಯಾಲಯದಲ್ಲಿ ಬುಧವಾರ ಕಲಾ ಕಾಲೇಜಿನಿಂದ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗದ ಪೊಲೀಸ್

   

ತುಮಕೂರು: ಸಕಾರಾತ್ಮಕ ಮನೋಭಾವ, ನಿರಂತರ ಪ್ರಯತ್ನದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಫಲರಾಗಲು ಸಾಧ್ಯ ಎಂದು ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗದ ಪೊಲೀಸ್ ಉಪ ಮಹಾ ನಿರೀಕ್ಷಕ ರವಿ ಡಿ.ಚನ್ನಣ್ಣನವರ್‌ ಹೇಳಿದರು.

ವಿಶ್ವವಿದ್ಯಾಲಯದಲ್ಲಿ ಬುಧವಾರ ಕಲಾ ಕಾಲೇಜಿನಿಂದ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ADVERTISEMENT

ಪೊಲೀಸರು ಜನರ ಮನಸ್ಥಿತಿ ಅರ್ಥೈಸಿಕೊಂಡು, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಆಗಷ್ಟೆ ಸಮಾಜದ ಪರಿಸ್ಥಿತಿ ಸುಧಾರಿಸುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವವರು ಏಕಾಗ್ರತೆಯಿಂದ ಅಧ್ಯಯನ ಮಾಡಬೇಕು. ಒಂದು ಗಂಟೆ ಓದಿದ್ದನ್ನು 15 ನಿಮಿಷ ಬರೆಯಬೇಕು. ಹಿಂದಿನ ದಿನ ಕಲಿತದ್ದನ್ನು ಮರುದಿನ ಮನನ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಲ್ಲಿ ಶೇ 80 ರಷ್ಟು ಮಂದಿ ಉತ್ತರ ಕರ್ನಾಟಕದವರು. ಅವರಲ್ಲಿ ಹಸಿವಿನಿಂದ ಬಂದ ಆತ್ಮವಿಶ್ವಾಸ ಹೆಚ್ಚಿರುತ್ತದೆ. ಕಲಿತ ವಿದ್ಯೆ ಅವರನ್ನು ಗಟ್ಟಿಗೊಳಿಸಿದೆ. ಕೀಳರಿಮೆ ಇಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣಲು ನಿರಂತರವಾಗಿ ಪ್ರಯತ್ನಿಸುತ್ತಾರೆ ಎಂದರು.

ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ‘ಸಮರ್ಪಣ ಮನೋಭಾವ, ಪ್ರಾಮಾಣಿಕತೆ, ಆತ್ಮವಿಶ್ವಾಸ ಇದ್ದರೆ ಉನ್ನತ ಸ್ಥಾನಕ್ಕೆ ಏರಬಹುದು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣುವ ಗುರಿ ಇಟ್ಟುಕೊಳ್ಳಬೇಕು’ ಎಂದು ತಿಳಿಸಿದರು.

ಬಿಬಿಎಂಪಿ ಹಣಕಾಸು ವಿಭಾಗದ ಉಪ ನಿಯಂತ್ರಕ ಎಸ್‌.ಎಂ.ದೇವರಾಜ, ಬೆಂಗಳೂರಿನ ಉಜ್ವಲ ಅಕಾಡೆಮಿ ನಿರ್ದೇಶಕ ಯು.ಮಂಜುನಾಥ ಉಪನ್ಯಾಸ ನೀಡಿದರು. ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣ, ವಿ.ವಿ ಹಣಕಾಸು ಅಧಿಕಾರಿ ಪ್ರೊ.ಪಿ.ಪರಮಶಿವಯ್ಯ, ಸಹ ಪ್ರಾಧ್ಯಾಪಕಿ ಸಿ.ಶೋಭಾ, ಸಹಾಯಕ ಪ್ರಾಧ್ಯಾಪಕ ಎಸ್.ಶಿವಣ್ಣ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.