ADVERTISEMENT

ಸಹಕಾರ ತತ್ವ ಬದುಕಿನ ಭಾಗವಾಗಲಿ: ಷಡಕ್ಷರಿ

ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸಭೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 7:10 IST
Last Updated 19 ಸೆಪ್ಟೆಂಬರ್ 2024, 7:10 IST
<div class="paragraphs"><p>ತಿಪಟೂರಿನಲ್ಲಿ ಬುಧವಾರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ನಡೆಯಿತು</p></div>

ತಿಪಟೂರಿನಲ್ಲಿ ಬುಧವಾರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ನಡೆಯಿತು

   

ತಿಪಟೂರು: ರೈತರು ಪಡೆದ ಸಾಲ ಸಕಾಲದಲ್ಲಿ ಮರು ಪಾವತಿಸಿ ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ನೆರವಾಗಬೇಕು. ಸಹಕಾರ ತತ್ವ ಬದುಕಿನ ಭಾಗವಾಗಬೇಕು ಎಂದು ಶಾಸಕ ಕೆ.ಷಡಕ್ಷರಿ ಸಲಹೆ ಮಾಡಿದರು.

ನಗರದಲ್ಲಿ ಬುಧವಾರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿ, ‘ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡಲಾಗುತ್ತಿದೆ. ಇದು ರೈತರ ಅಭಿವೃದ್ಧಿಗೆ ಪೂರಕವಾಗಿದ್ದು, ಎಲ್ಲರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ADVERTISEMENT

ಸಹಕಾರ ಸಂಘದ ಅಧ್ಯಕ್ಷ ಎಚ್.ಬಿ.ನಾಗರಾಜ್‌, ‘ತಾಲ್ಲೂಕಿನ ಬಡ, ಮಧ್ಯಮ ವರ್ಗದ ಜನರಿಗೆ ಸಂಘ ನೆರವಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ, ಸವಲತ್ತುಗಳನ್ನು ನೀಡುವುದು ನಮ್ಮ ಗುರಿಯಾಗಿದೆ. ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಬದ್ಧತೆ ಹೊಂದಿದ್ದೇವೆ’ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಮುಖಂಡ ಸುರೇಶ್, ಸಂಘದ ಉಪಾಧ್ಯಕ್ಷೆ ಎಂ.ಕಾತ್ಯಾಯಿನಿ, ಕಾರ್ಯದರ್ಶಿ ಬಿ.ಸಿ.ಅಶೋಕ್‌ಕುಮಾರ್, ನಿರ್ದೇಶಕರಾದ ರೇಣುಕಾ ಮೂರ್ತಿ, ಬೋರಲಿಂಗೇಗೌಡ, ಶಂಕರಮೂರ್ತಿ, ಕಾಂತರಾಜ್, ತಮ್ಮಯ್ಯ, ಯೋಗಾನಂದ ಮೂರ್ತಿ, ದಾಸಪ್ಪ, ಟಿ.ಸಿ.ಶೈಲಜಾ, ಪಿ.ಹೇಮಾ ಮೊದಲಾದವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.