ADVERTISEMENT

ಸರ್ಕಾರ ಇಳಿಸಲು ಬಿಜೆಪಿ, ಜೆಡಿಎಸ್‌ ಶತ ಪ್ರಯತ್ನ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 6:18 IST
Last Updated 3 ಅಕ್ಟೋಬರ್ 2024, 6:18 IST
ಮಧುಗಿರಿಯಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ನಡೆದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯಲ್ಲಿ ಸಚಿವ ಕೆ.ಎನ್‌. ರಾಜಣ್ಣ ಮಾತನಾಡಿದರು
ಮಧುಗಿರಿಯಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ನಡೆದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯಲ್ಲಿ ಸಚಿವ ಕೆ.ಎನ್‌. ರಾಜಣ್ಣ ಮಾತನಾಡಿದರು   

ಮಧುಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲದ ಸುಳ್ಳುಗಳನ್ನು ಹೇಳಿಕೊಂಡು ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಮತ್ತು ಜೆಡಿಎಸ್ ‌ಶತ ಪ್ರಯತ್ನ ಮಾಡುತ್ತಿದೆ. ಆದರೆ ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ಪಟ್ಟಣದಲ್ಲಿ ಬ್ಲಾಕ್‌ ಕಾಂಗ್ರೆಸ್‌ನಿಂದ ನಡೆದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯಲ್ಲಿ ಅವರು ಮಾತನಾಡಿದರು.

ಸಿದ್ದರಾಮಯ್ಯ ಅವರ ಆಡಳಿತವನ್ನು ಜನರು ಮೆಚ್ಚಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ 2011ರ ಮಾರ್ಚ್‌ 17ರಂದು ಆಗಿನ ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌.ಶಂಕರಮೂರ್ತಿಗೆ ಸಲ್ಲಿಸಿದ ದಾಖಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮುಡಾದಿಂದ ತಮ್ಮ ಕುಟುಂಬಕ್ಕೆ 48 ನಿವೇಶನಗಳನ್ನ ಹಂಚಿಕೆ ಮಾಡಿದ್ದನ್ನ ಪ್ರಸ್ತಾಪಿಸಿದ್ದರು. ಜೆಡಿಎಸ್ ಮತ್ತು ಬಿಜೆಪಿ ಸತ್ಯವನ್ನು ಸುಳ್ಳು ಮಾಡುತ್ತದೆ. ಸುಳ್ಳನ್ನು ಸತ್ಯ ಮಾಡುತ್ತದೆ ಎಂದು ಟೀಕಿಸಿದರು.

ADVERTISEMENT

ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಪುರಸಭೆ ಅಧ್ಯಕ್ಷ ಲಾಲಾಪೇಟೆ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಯ್ಯ, ಕೆಪಿಸಿಸಿ ಸದಸ್ಯ ಎಂ.ಎಸ್.ಮಲ್ಲಿಕಾರ್ಜುನಯ್ಯ, ತಾ.ಪಂ.ಮಾಜಿ ಅಧ್ಯಕ್ಷ ಮಹಾಲಿಂಗಯ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ಪಿ.ಟಿ.ಗೋವಿಂದಪ್ಪ, ಎಂ.ಬಿ.ಮರಿಯಣ್ಣ, ಕೆಎಂಎಫ್ ನಿರ್ದೇಶಕ ಮೈದನಹಳ್ಳಿ ಕಾಂತರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ನಾಗೇಶಬಾಬು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.