ADVERTISEMENT

ಮಧುಗಿರಿ: ಕಲುಷಿತ ನೀರು ಸೇವನೆ– 54 ಜನ ಅಸ್ವಸ್ಥ

ಚಿನ್ನೇನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಕಲುಷಿತ ನೀರು ಸೇವಿಸಿ 54 ಮಂದಿ ವಾಂತಿ ಮತ್ತು ಬೇಧಿಯಿಂದ ಅಸ್ವಸ್ಥರಾಗಿದ್ದಾರೆ.

​ಪ್ರಜಾವಾಣಿ ವಾರ್ತೆ
Published 11 ಜೂನ್ 2024, 10:26 IST
Last Updated 11 ಜೂನ್ 2024, 10:26 IST
<div class="paragraphs"><p>ಮಧುಗಿರಿ: ಕಲುಷಿತ ನೀರು ಸೇವನೆ– 54 ಜನ ಅಸ್ವಸ್ಥ</p></div>

ಮಧುಗಿರಿ: ಕಲುಷಿತ ನೀರು ಸೇವನೆ– 54 ಜನ ಅಸ್ವಸ್ಥ

   

ಮಧುಗಿರಿ: ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಕಲುಷಿತ ನೀರು ಸೇವಿಸಿ 54 ಮಂದಿ ವಾಂತಿ ಮತ್ತು ಬೇಧಿಯಿಂದ ಅಸ್ವಸ್ಥರಾಗಿದ್ದಾರೆ.

ಚಿನ್ನೇನಹಳ್ಳಿಯ ಓವರ್‌ ಹೆಡ್‌ ಟ್ಯಾಂಕ್‌ ಮತ್ತು ಶುದ್ಧ ನೀರಿನ ಘಟಕದ ನೀರು ಸೇವಿಸಿ ಅಸ್ವಸ್ಥರಾಗಿದ್ದಾರೆ. ಅವರನ್ನು ತಕ್ಷಣಕ್ಕೆ ಮಿಡಿಗೇಶಿ ಪ್ರಾಥಮಿಕ ಆರೋಗ್ಯ ಕೇಂದ್ರ, ಮಧುಗಿರಿ ಸಾರ್ವಜನಿಕ ಆಸ್ಪತ್ರೆ , ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ADVERTISEMENT

‘ಶುದ್ಧ ನೀರಿನ ಘಟಕ ಮತ್ತು ಓವರ್‌ ಹೆಡ್‌ ಟ್ಯಾಂಕ್‌ ನೀರನ್ನು ಜಿಲ್ಲಾ ಪರೀಕ್ಷೆ ಕೇಂದ್ರಕ್ಕೆ ಕಳುಹಿಸಲಾಗಿದೆ. 24 ಗಂಟೆ ನಂತರ ವರದಿ ಬರಲಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಶ್ರೀನಿವಾಸ್ ತಿಳಿಸಿದರು.

ಚಿನ್ನೇನಹಳ್ಳಿ ಗ್ರಾಮಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಎಲ್ಲರಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಓವರ್‌ ಹೆಡ್‌ಟ್ಯಾಂಕರ್ ಮತ್ತು ಗ್ರಾಮದ ಚರಂಡಿಗಳನ್ನು ಸ್ವಚ್ಚವಾಗಿ ಇಟ್ಟುಕೊಳ್ಳುವಂತೆ ತಿಳಿಸಲಾಗಿತ್ತು. ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ಮುಂದೆ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.