ADVERTISEMENT

ತಿಪಟೂರು | ಅಪಘಾತ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 28 ಜನವರಿ 2024, 14:31 IST
Last Updated 28 ಜನವರಿ 2024, 14:31 IST

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ತಿಮ್ಲಾಪುರ ಗ್ರಾಮದ ಬಳಿ ಕಾರು ಮತ್ತು ಬೈಕ್‌ ನಡುವೆ ಭಾನುವಾರ ನಡೆದ ಅಪಘಾತದಲ್ಲಿ ಬೈಕ್‌ ಸವಾರ  ಹೊನ್ನವಳ್ಳಿ ಗ್ರಾಮದ ಸೋಮಶೇಖರ್ (42) ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ಉಮೇಶ್ ಅವರ ಕಾಲು ಮುರಿದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮಶೇಖರ್ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಅವರೆಕಾಯಿಯನ್ನು ನಗರದ ಬೀದಿ ಬದಿಯಲ್ಲಿ ಮಾರಾಟ ಮಾಡಿ ಊರಿಗೆ ಮರಳುವಾಗ ಅಪಘಾತವಾಗಿದೆ.

ADVERTISEMENT

ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.