ADVERTISEMENT

ತುಮಕೂರು | ಯೋಗ ದಿನಾಚರಣೆ: ಕೇಂದ್ರ ಸಚಿವ ಸೋಮಣ್ಣ ಚಾಲನೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 4:07 IST
Last Updated 21 ಜೂನ್ 2024, 4:07 IST
   

ತುಮಕೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಶುಕ್ರವಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸಾಮೂಹಿಕ ಯೋಗ ನಡೆಯಿತು.

ಜಿಲ್ಲಾ ಆಡಳಿತ, ಆಯುಷ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.

ನಂತರ ಮಾತನಾಡಿ, ಯೋಗ ಭಾರತದ ಪರಂಪರೆಯ ಅತಿ ಮಹತ್ವದ ಕೊಡುಗೆ. ಇದು ದೇಹ, ಮನಸ್ಸನ್ನು ಒಳಗೊಂಡಿದೆ. ಮನುಷ್ಯ, ಪ್ರಕೃತಿ ಮಧ್ಯದ ಬಾಂಧವ್ಯವೇ ಯೋಗ. ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ. ಇದೊಂದು ಬದುಕು ಬದಲಿಸುವ, ಅರಳಿಸುವ ವಿಧಾನ ಎಂದರು.

ADVERTISEMENT

ಯೋಗ ಸಂಯಮ ಮತ್ತು ಸಾರ್ಥಕತೆಯನ್ನು ಒಳಗೊಂಡಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿಸುತ್ತದೆ. ಆರು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇದೆ. ವಿಶ್ವದ ಎಲ್ಲ ರಾಷ್ಟ್ರಗಳಲ್ಲಿ ಪ್ರತಿ ವರ್ಷ ಯೋಗ ದಿನ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ಯೋಗದ ಮಹತ್ವ ತಿಳಿಸಿ ಕೊಟ್ಟರು. ಭಾರತೀಯರ ಸಾರ್ವಭೌಮತ್ವ, ಆರೋಗ್ಯ ಕಾಪಾಡುವಲ್ಲಿ ಯೋಗ ಸಹಕಾರಿಯಾಗಿದೆ ಎಂದರು.

ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳು, ಸಾರ್ವಜನಿಕರು ಯೋಗಾಸನ ಮಾಡಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.