ADVERTISEMENT

ಕುಣಿಗಲ್ | ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ: ಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 13:38 IST
Last Updated 21 ನವೆಂಬರ್ 2024, 13:38 IST
<div class="paragraphs"><p>ಅಮಾನತು</p></div>

ಅಮಾನತು

   

ಕುಣಿಗಲ್: ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ, ಹಣ ದುರುಪಯೋಗದ ಆರೋಪದ ಮೇಲೆ ತಾಲ್ಲೂಕಿನ ಸೆಣಬಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಅಂಜನಪ್ಪ ಅವರನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಬೋರೆಗೌಡ ಆದೇಶ ಹೊರಡಿಸಿದ್ದಾರೆ.

ಅಂಜನಪ್ಪ ಅವರನ್ನು ತಾಲ್ಲೂಕಿನ ಉಂಗ್ರ ಗ್ರಾಮದ ಶಾಲೆಗೆ ತಾತ್ಕಾಲಿಕವಾಗಿ ನಿಯೋಜಿಸಿದ್ದು, ಈ ಸಮಯದಲ್ಲಿ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಪತ್ರಿಕೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಂದ ದೂರು ಬಂದಿದ್ದು, ಉಪನಿರ್ದೇಶಕರಿಂದ ಕ್ರಮ ತೆಗೆದುಕೊಳ್ಳಲು ಬಂದ ಸೂಚನೆ ಮೇರೆಗೆ ಸಮೂಹ ಸಂಪನ್ಮೂಲ ವ್ಯಕ್ತಿ ವಿಚಾರಣೆಯ ಸಮಯದಲ್ಲಿ ವಿದ್ಯಾರ್ಥಿಗಳಿಂದ ಮೌಖಿಕ ದೂರು ಬಂದ ಹಿನ್ನೆಲೆಯಲ್ಲಿ, ತ್ರಿ ಸದಸ್ಯ ಸಮಿತಿ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ಸೇರಿದಂತೆ ಶಾಲಾ ಶೈಕ್ಷಣಿಕ ಅಭಿವೃದ್ಧಿಗೆ ದಾನಿಗಳಿಂದ ಪಡೆದಿರುವ ಹಣ ದುರುಪಯೋಗ ಪಡಿಸಿಕೊಂಡಿರುವ ಅಂಶಗಳು ಬೆಳಕಿಗೆ ಬಂದಿದೆ.

ADVERTISEMENT

ಸಮಿತಿಯ ವರದಿ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಬೋರೆಗೌಡ ಸಹ ಶಿಕ್ಷಕ ಅಂಜನಪ್ಪ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.