ADVERTISEMENT

ಚಿಕ್ಕನಾಯಕನಹಳ್ಳಿ: ಇಂದ್ರ ಧನುಷ್ ಲಸಿಕಾ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2023, 14:18 IST
Last Updated 7 ಆಗಸ್ಟ್ 2023, 14:18 IST
ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದ್ರ ಧನುಷ್ ಲಸಿಕಾ ಅಭಿಯಾನಕ್ಕೆ ಶಾಸಕ ಸಿ.ಬಿ. ಸುರೇಶ್‌ಬಾಬು ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು
ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದ್ರ ಧನುಷ್ ಲಸಿಕಾ ಅಭಿಯಾನಕ್ಕೆ ಶಾಸಕ ಸಿ.ಬಿ. ಸುರೇಶ್‌ಬಾಬು ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು    

ಚಿಕ್ಕನಾಯಕನಹಳ್ಳಿ: ಮಕ್ಕಳು ಅಂಗವಿಕಲರಾಗುವುದನ್ನು ತಪ್ಪಿಸಲು ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆ ಹಾಕಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿ.ಬಿ. ಸುರೇಶ್‌ ಬಾಬು ಒತ್ತಾಯಿಸಿದರು.

ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಮಿಷನ್ ಇಂದ್ರ ಧನುಷ್ 5.0 ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲ್ಲೂಕಿನಲ್ಲಿ ಅಂಗವಿಕಲ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಸರಿಯಾದ ಸಮಯಕ್ಕೆ ಲಸಿಕೆ ಹಾಕಿಸುವ ಮೂಲಕ ಮಕ್ಕಳನ್ನು ರೋಗದಿಂದ ರಕ್ಷಿಸಿಕೊಳ್ಳಬೇಕು ಎಂದು ಪಾಲಕರಿಗೆ ಸಲಹೆ ನೀಡಿದರು.

ADVERTISEMENT

ಈ ಸಂದರ್ಭದಲ್ಲಿ ಆಸ್ಪತ್ರೆ ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಆಸ್ಪತ್ರೆ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.